ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿದ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ.
ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿನ ಮನೆಗಳಿಗೆ ನೀರು ನುಗ್ಗಿದೆ.ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮನೆಗೆ ನುಗ್ಗಿದ ನೀರಿನಿಂದ ಮನೆಯ ಅಡುಗೆ ಕೋಣೆಗೆ ಹಾಗೂ ಮನೆಯಲ್ಲಿನ ಹಾಸಿಗೆ ಜಲಾವೃತವಾಗಿವೆ.ಕಳೆದ ನಾಲ್ಕು ವರ್ಷಗಳಿಂದ ಚರಂಡಿ ಸರಿಪಡಿಸಿದ ಹಿನ್ನೆಲೆಯಲ್ಲಿ ಈ ಅವಾಂತರ ಸೃಷ್ಟಿಗೆ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಶಾಸಕ ಅಭಯ ಪಾಟೀಲ ವಿರುದ್ದ ಸ್ಥಳೀಯ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ನಗರದ ಗೋಗಟೆ ವೃತ್ತದ ಬಳಿ ರಸ್ತೆ ಸಿಮೆಂಟ್ ರಸ್ತೆ ಕುಸಿದಿದೆ. ಇದೆ ಸಮಯಕ್ಕೆ ಚಲಿಸುತ್ತಿದ್ದ ಕಾರು ಗುಂಡಿಯಲ್ಲಿ ಸಿಲುಕಿಕೊಂಡಿದೆ. ಗೋವಾವೇಸ್ ಬಳಿ ಕಾರ್ಪೊರೇಷನ್ ಮಳಿಗೆ ಆವರಣದಲ್ಲಿ ನೀರು ಸಂಗ್ರಹವಾಗಿದ್ದು, ಕೆರೆಯಂತೆ ಕಾಣುತ್ತಿದೆ. ನಗರದ ಖಾಸಬಾಗ್ ಬಜಾರನಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಮಹಿಳೆಯರು ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಟೊಮ್ಯಾಟೊಗಳನ್ನು ಹಿಡಿದಿಟ್ಟುಕೊಳ್ಳಲು ಹರಸಾಹಸಪಟ್ಟರು.