ಜನತೆಯ ಪಾಲ್ಗೊಳ್ಳುವಿಕೆ ಸದೃಢ ಪ್ರಜಾತಂತ್ರಕ್ಕೆ ಪೂರಕ: ಡಾ.ಕೆ.ಎನ್.ಅನುರಾಧ

| Published : Mar 22 2024, 01:02 AM IST

ಜನತೆಯ ಪಾಲ್ಗೊಳ್ಳುವಿಕೆ ಸದೃಢ ಪ್ರಜಾತಂತ್ರಕ್ಕೆ ಪೂರಕ: ಡಾ.ಕೆ.ಎನ್.ಅನುರಾಧ
Share this Article
  • FB
  • TW
  • Linkdin
  • Email

ಸಾರಾಂಶ

ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಕಳೆದ ಬಾರಿಗಿಂತ ಮತದಾನದ ಪ್ರಮಾಣ ಈ ಬಾರಿ ಹೆಚ್ಚಾಗಬೇಕಿದ್ದು, ಶೇ.100ರಷ್ಟು ಮತದಾನವಾಗಬೇಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಸಮಿತಿಯಿಂದ ಜಾಗೃತಿ ಜಾಥಾ, ರಂಗೋಲಿ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮ ರೂಪಿಸಲಾಗಿದೆ.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಪ್ರಜಾಪ್ರಭುತ್ವದ ಪ್ರಮುಖ ಭಾಗವಾಗಿರುವ ಮತದಾನದಲ್ಲಿ ಎಲ್ಲಾ ಮತದಾರರೂ ಭಾಗವಹಿಸಬೇಕು. ಇದಕ್ಕಾಗಿ ಸಮಿತಿ ವತಿಯಿಂದ ಚುನಾವಣಾವರೆಗೂ ಮತದಾನದ ಕುರಿತು ವಿವಿಧ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಡಾ.ಕೆ.ಎನ್.ಅನುರಾಧ ಹೇಳಿದರು.

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿ ವತಿಯಿಂದ ನಡೆದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ಮತದಾನದ ಪ್ರಮಾಣ ಹೆಚ್ಚಾಗಬೇಕಿದೆ. ಕಳೆದ ಬಾರಿಗಿಂತ ಮತದಾನದ ಪ್ರಮಾಣ ಈ ಬಾರಿ ಹೆಚ್ಚಾಗಬೇಕಿದ್ದು, ಶೇ.100ರಷ್ಟು ಮತದಾನವಾಗಬೇಕಿದೆ. ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಸ್ವೀಪ್ ಸಮಿತಿಯಿಂದ ಜಾಗೃತಿ ಜಾಥಾ, ರಂಗೋಲಿ ಸ್ಪರ್ಧೆ ಮತ್ತಿತರೆ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ಮತದಾನ ಕರ್ತವ್ಯವಾಗಲಿ:

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಮಾತನಾಡಿ, ಮತದಾನದ ಹಕ್ಕೆಂದು ಸುಮ್ಮನಾಗದೆ ಅದು ನಮ್ಮ ಕರ್ತವ್ಯವೆಂದು ಕಾರ್ಯಪ್ರವೃತ್ತರಾದಾಗ ಮಾತ್ರ ಪುಜಾಪ್ರಭುತ್ವ ಸದೃಢಗೊಳ್ಳುತ್ತದೆ. ಇಂದು ಮತದಾನದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿ, ಮತದಾನದ ಪ್ರತಿಜ್ಞಾ ವಿಧಿಯ ಕರಪತ್ರಗಳನ್ನು ಹಂಚಲಾಗುತ್ತಿದೆ ಎಂದು ಹೇಳಿದರು.

ಮತದಾನ ಜಾಗೃತಿ ಮೂಡಿಸುವ ವಿವಿಧ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ನಗರದ ವಿವಿಧ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಂದ ಭಗತ್ ಸಿಂಗ್ ಕ್ರೀಡಾಂಗಣದವರೆಗೆ ಜಾಥಾ ನಡೆಸಲಾಯಿತು.

ಜಿಪಂ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ನಗರಸಭೆ ಪೌರಾಯುಕ್ತ ಕೆ.ಪರಮೇಶ್, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಶ್ರೀಕಾಂತ್ ಇದ್ದರು.