ಜನಪರ ಯೋಜನೆ ಪ್ರಾಮಾಣಿಕವಾಗಿ ತಲುಪಿಸಬೇಕು: ಶಾಸಕ ಬೇಳೂರು

| Published : Jan 25 2024, 02:00 AM IST

ಜನಪರ ಯೋಜನೆ ಪ್ರಾಮಾಣಿಕವಾಗಿ ತಲುಪಿಸಬೇಕು: ಶಾಸಕ ಬೇಳೂರು
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಅಭಿವೃದ್ಧಿ ಯೋಜನೆಗಳು ಮಧ್ಯವರ್ತಿಗಳ ಪಾಲು ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗೆ ತಲುಪಿಸಬೇಕು. ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ತಲುಪಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೊಸನಗರದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಸನಗರ

ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರಾಮಾಣಿಕವಾಗಿ ಸಾರ್ವಜನಿಕರಿಗೆ ತಲುಪಿಸುವ ಗುರುತರವಾದ ಜವಾಬ್ದಾರಿ ತಮ್ಮ ಮೇಲೆ ಇದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಈಡಿಗ ಭವನದಲ್ಲಿ ಬುಧವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಅಭಿವೃದ್ಧಿ ಯೋಜನೆಗಳು ಮಧ್ಯವರ್ತಿಗಳ ಪಾಲು ಆಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.

ಸಮಸ್ಯೆ ಪರಿಹಾರ:

ರಾಜ್ಯ ಸರ್ಕಾರಿ ನೌಕರರ ಹಕ್ಕು ಹಾಗೂ ಅವರ ವೇತನ ಕುರಿತ ವರದಿಯನ್ನು ಸರ್ಕಾರದ ಗಮನ ಸೆಳೆದು ಶೀಘ್ರದಲ್ಲಿ ಪರಿಹಾರ ಒದಗಿಸುವ ಭರವಸೆ ನೀಡಿದರು. ಇಲ್ಲಿನ ಗುರುಭವನ ನವೀಕರಣ, ಪಟ್ಟಣದಲ್ಲಿ ನೌಕರರ ಸಂಘಕ್ಕೆ ನಿವೇಶನ ಹಾಗೂ ಕಟ್ಟಡ ಮಂಜೂರಾತಿ ಬಗ್ಗೆ ಅವರು ಶೀಘ್ರದಲ್ಲಿ ಸರ್ಕಾರಿ ಮಟ್ಟದಲ್ಲಿ ಮಾತನಾಡುವ ಆಶ್ವಾಸನೆ ನೀಡಿದರು. ನೌಕರರ ಸಂಘದಲ್ಲಿ ಮಹಿಳಾ ಮೀಸಲಾತಿ ಕಡಿಮೆ ಇದ್ದಂತೆ ಇದೆ. ಮಹಿಳಾ ನೌಕರರ ರಕ್ಷಣೆ, ಹಿತಾಸಕ್ತಿಗಾಗಿ ಮಹಿಳೆಯರಿಗೆ ತಮ್ಮ ಸಂಘದಲ್ಲಿ ಶೇ.35ರಷ್ಟು ಮೀಸಲಾತಿ ನೀಡುವಂತೆ ಅವರು ಕೋರಿದರು.

ತಾಲೂಕು ಅಧ್ಯಕ್ಷ ಬಸವಣ್ಯಪ್ಪ ಅಧ್ಯಕ್ಷತೆ ವಹಿಸಿ, ಮಲೆನಾಡಿನ, ಹಳ್ಳಿಗಲ್ಲಿ ಕೆಲಸ ಮಾಡುವ ನೌಕರರ ಸಮಸ್ಯೆಯ ಮೇಲೆ ಬೆಳಕು ಚೆಲ್ಲಿದರು.

ಇದೇ ವೇಳೆಯಲ್ಲಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನಿಕಟ ಪೂರ್ವ ಅಧ್ಯಕ್ಷರಿಗೆ, ಸಾಧಕರಿಗೆ ಸನ್ಮಾನ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ, ತಹಸೀಲ್ದಾರ್ ರಶ್ಮಿ, ಕಾರ್ಯನಿರ್ವಾಣಾಧಿಕಾರಿ ನರೇಂದ್ರಕುಮಾರ್, ಬಿಇಒ ಕೃಷ್ಣಮೂರ್ತಿ, ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಗೌರವ ಅಧ್ಯಕ್ಷ ಪಾಪಣ್ಣ, ಜಿಲ್ಲಾ ಖಜಾಂಚಿ ನರಸಿಂಹಮೂರ್ತಿ, ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ತಾಲೂಕು ಪದಾಧಿಕಾರಿಳು ಇದ್ದರು.

- - -

-24ಎಚ್‍ಒಎಸ್1ಪಿ:

ಹೊಸನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಸಮ್ಮೇಳನವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.