ಸಾರಾಂಶ
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ನಗರಸಭೆ ಹಾಗೂ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳನ್ನು ಪಡೆದಿರುವ ಕನ್ನಡಪರ ಹೋರಾಟಗಾರರ ಹಿನ್ನೆಲೆಯ ಮುಖಂಡರಿಗೆ ತಾಲೂಕು ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ನೇತೃತ್ವದಲ್ಲಿ ಅಭಿನಂದಿಸಲಾಯಿತು.ಪುರಭವನದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ರೈಲ್ವೇಸ್ಟೇಷನ್ ಎಂ.ಮಲ್ಲೇಶ್ ಹಾಗೂ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಬಾಯಿ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಸಮಿತಿ ಸದಸ್ಯ ಸಂಜೀವ್‌ನಾಯಕ್, ಕನ್ನಡ ಹೆಸರಿನಲ್ಲಿ ರಾಜಕಾರಣ ಇಂದಿನ ಅನಿವಾರ್ಯವಾಗಿದ್ದು, ಜನಪ್ರತಿನಿಧಿಗಳು ಕನ್ನಡಿಗರ ದನಿಯಾಗಬೇಕು. ಆಗ ಮಾತ್ರ ಸ್ಥಳೀಯ ಜನರ ಆಶೋತ್ತರಗಳು ಈಡೇರುತ್ತವೆ ಎಂದರು.ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಕನ್ನಡ ಪಕ್ಷ ರಾಜ್ಯ ಸಮಿತಿ ಸದಸ್ಯರಾದ ಸಂಜೀವ್ ನಾಯಕ್, ಡಿ.ಪಿ.ಆಂಜನೇಯ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ, ಶಿವರಾಮೇಗೌಡರ ಬಣದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮರುಳರಾಧ್ಯ, ತಾಲೂಕು ಕಲಾವಿದರ ಸಂಘದ ಅಧ್ಯಕ್ಷ ರಾಮಾಂಜನಪ್ಪ, ತಾಲೂಕು ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ಗೌರವಾಧ್ಯಕ್ಷ ಕೆ ಆನಂದ್, ಕಾರ್ಯಾಧ್ಯಕ್ಷ ನಾರಾಯಣಸ್ವಾಮಿ, ಅಧ್ಯಕ್ಷ ಜೆ.ಆರ್ ರಮೇಶ್, ಉಪಾಧ್ಯಕ್ಷ ಜಿ.ರಾಮು, ಪ್ರಧಾನ ಕಾರ್ಯದರ್ಶಿ ಗುರುರಾಜ್, ಸಂಘಟನಾ ಕಾರ್ಯದರ್ಶಿ ಸಂಜೀವ್, ಸಂಚಾಲಕ ಮಂಜುನಾಥ್, ನಿರ್ದೇಶಕ ಆರ್ ರಾಘವೇಂದ್ರ, ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ರಾಜ್ಯಾಧ್ಯಕ್ಷ ಟಿ.ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.