ಸಾರಾಂಶ
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯಸರ್ಕಾರದ ಉತ್ತಮ ಆಡಳಿತ ಹಾಗೂ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿರುವ ಜನರು ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಸಂಘದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು ವಿಶ್ವಾಸ ವ್ಯಕ್ತಪಡಿಸಿದರು.ನಗರದ ವಿಜಯನಗರ 2ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಮತಯಾಚಿಸಿದ ಅವರು, ಡಿ.ಕೆ.ಸುರೇಶ್ ನಾಲ್ಕನೇ ಬಾರಿ ಸಂಸದರಾಗುವುದು ಖಚಿತ. ಕಾಂಗ್ರೆಸ್ ಪಕ್ಷ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಅಧಿಕಾರ ಹಿಡಿದ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಜನಪರ ಆಡಳಿತ ನೀಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು ಗ್ಯಾರಂಟಿ ಯೋಜನೆಗಳಿಂದ ಜನ ಸಂತಸಗೊಂಡಿದ್ದಾರೆ ಎಂದು ಹೇಳಿದರು.
ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ಯೋಜನೆಯಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನ ಗುಣಮಟ್ಟ ಸುಧಾರಣೆಯಾಗಿದೆ. ಪ್ರತಿ ಮನೆಯಲ್ಲೂ ಕಾಂಗ್ರೆಸ್ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ.ಅಲ್ಲದೆ ಸುರೇಶ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಜನರಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಸಂಸದ ಡಿ.ಕೆ.ಸುರೇಶ್ ಜನಪರ ಕೆಲಸ ಮಾಡುವುದರಲ್ಲಿ ಸದಾ ಮುಂದಿದ್ದು, ಉತ್ತಮವಾಗಿ ಕ್ಷೇತ್ರವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ದಿದ್ದಾರೆ. ಎಲ್ಲಾ ವರ್ಗದ ಜನ ಬೆಂಬಲ ಅವರಿಗಿದೆ ಮತ್ತೋಮ್ಮೆ ಡಿ.ಕೆ. ಸುರೇಶ್ ವಿಜಯಶಾಲಿಯಾಗಲಿದ್ದು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಬೇಕಿದೆ ರೈಡ್ ನಾಗರಾಜು ಮನವಿ ಮಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕ್ಯಾಸಪುರ ಶಿವಣ್ಣ, ಛಲವಾದಿ ಗೋಪಿ, ಸಿದ್ದಾರ್ಥ, ಕರಿನಾಗಣ್ಣ, ಕಿಶೋರ್, ವೆಂಕಟೇಶ್, ಶಿವಪ್ಪ ಮತ್ತು ಭುವನ್ ಹಾಜರಿದ್ದರು.24ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ವಿಜಯನಗರ 2ನೇ ವಾರ್ಡಿನಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರವಾಗಿ ಹಿಂದುಳಿದ ವರ್ಗಗಳ ಸಂಘದ ಜಿಲ್ಲಾಧ್ಯಕ್ಷ ರೈಡ್ ನಾಗರಾಜು ಮತಯಾಚಿಸಿದರು.