ಸಾರಾಂಶ
ಚಿಕ್ಕಮಗಳೂರು: ಮನೆ, ಬೀದಿ, ಇಡೀ ಊರನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕೆಂದು ಕಾನೂನು ಸೇವಾ ಪ್ರಾಧಿಕಾರ, ಪುರಸಭಾ ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಕರೆ ನೀಡಿದರು.
ಚಿಕ್ಕಮಗಳೂರು: ಮನೆ, ಬೀದಿ, ಇಡೀ ಊರನ್ನು ಶುಚಿಯಾಗಿಟ್ಟುಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಬೇಕೆಂದು ಕಾನೂನು ಸೇವಾ ಪ್ರಾಧಿಕಾರ, ಪುರಸಭಾ ಆಡಳಿತ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಕರೆ ನೀಡಿದರು.
ಸ್ವಚ್ಛತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಜಾಥಾ ಉದ್ಘಾಟಿಸಿ ಮಾತನಾಡಿ ಒಂದು ಗಂಟೆ ಕಾಲ ಎಲ್ಲರೂ ಸೇರಿ ನಡೆಸುತ್ತಿರುವ ಶ್ರಮದಾನವಿದು. ಹಾಗೆಂದು ಸ್ವಚ್ಛತಾ ಆಂದೋಲನ ಅಕ್ಟೋಬರ್ 2ಕ್ಕೆ ಮುಕ್ತಾಯವಾಗಬಾರದು. ಆಡಳಿತ ವ್ಯವಸ್ಥೆಗಳು ಈ ವಿಚಾರದಲ್ಲಿ ಕಟಿಬದ್ಧವಾಗಿ ಕಾರ್ಯ ನಿರ್ವಹಿಸಬೇಕು. ಈ ಆಂದೋಲನ ಹಳ್ಳಿ ಹಳ್ಳಿಯಲ್ಲೂ ಜನಾಂದೋಲನವಾಗಿ ರೂಪುಗೊಳ್ಳಬೇಕು. ಎಲ್ಲೆಡೆ ಕೆರೆಕಟ್ಟೆಯನ್ನು ಶುಚಿಯಾಗಿಟ್ಟು ಕೊಂಡರೆ ನಮ್ಮ ದೇಶಕ್ಕೆ ಕೊಡುಗೆ ನೀಡಿದಂತಾಗುತ್ತದೆ ಎಂದು ಹೇಳಿದರು.ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಮುಖ್ಯವಾಗಿ ಬೇಕಾಗಿರುವುದು ಸ್ವಚ್ಛತೆ. ಜನರಲ್ಲಿ ಕೂಡ ಈ ಬಗ್ಗೆ ಸಾಮಾಜಿಕ ಕಳಕಳಿ, ಜಾಗೃತಿ, ತಿಳುವಳಿಕೆ ಇಲ್ಲ. ಈ ಬಗ್ಗೆ ಸರ್ಕಾರಿ ಅಧಿಕಾರಿಗಳು ಈ ಬಗ್ಗೆ ಜನರಲ್ಲಿ ಅರಿವು ಮೂಡಿಸ ಬೇಕು. ಜನರನ್ನು ಒಗ್ಗೂಡಿಸಿ ಈ ಬಗ್ಗೆ ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿದರು. ಈ ಸಂದರ್ಭ ದಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ. ಜಿಲ್ಲಾ ಎಸ್ಪಿ ಡಾ.ವಿಕ್ರಮ್ ಅಮಟೆ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪಿ.ಬಿ.ಸ್ನೇಹಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ತಿರುಮಲೇಶ್ ಉಪಸ್ಥಿತರಿದ್ದರು.25 ಕೆಸಿಕೆಎಂ 2ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಕಸಪೊರಕೆ ಹಿಡಿದು ಕಸಗುಡಿಸಿ ಚೀಲಗಳಿಗೆ ಕಸ ಹಾಕುವ ಮೂಲಕ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರು.