ಮಕ್ಕಳಿಗೆ ಎಲ್‌ಕೆಜಿ ಯುಕೆಜಿ ತರಗತಿಗೆ ಸಂಬಂಧಿಸಿದ ಗುಣಮಟ್ಟದ ಕಲಿಕೆಯನ್ನು ಚಿಕ್ಕಂದಿನಿಂದಲೇ ಅಭ್ಯಾಸ ಮಾಡಿಸಬೇಕೆಂಬ ಉದ್ದೇಶದಿಂದ ಮೊದಲ ಹಂತದಲ್ಲಿ ತಾಲೂಕಿನ 53 ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿ ಸರ್ಕಾರದಿಂದ ಸ್ಮಾರ್ಟ್ ಟಿವಿಗಳನ್ನು ಪೂರೈಕೆ ಮಾಡಲಾಗಿದೆ.
ಕನ್ನಡಪ್ರಭ ವಾರ್ತೆ ನಾಗಮಂಗಲ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಎರಡೂವರೆ ವರ್ಷದಲ್ಲಿ ತಾಲೂಕಿನ ಜನರಿಗೆ 700 ಕೋಟಿಗೂ ಹೆಚ್ಚು ಹಣ ತಲುಪಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರದ ಕಟ್ಟಡ ಮತ್ತು ಎಲ್‌ಕೆಜಿ-ಯುಕೆಜಿ ತರಗತಿಗಳ ಸರ್ಕಾರಿ ಮಾಂಟೆಸ್ಸರಿ ಕೇಂದ್ರ ಉದ್ಘಾಟಿಸಿ ಮಾತನಾಡಿ, ಚಿಕ್ಕ ಮಕ್ಕಳಿಗೆ ಅಕ್ಷರ ಕಲಿಕೆ, ಸ್ವಚ್ಛತೆಯ ಅಭ್ಯಾಸ ಮಾಡಿಸಲು ಮತ್ತು ಮಹಿಳೆಯರ ಅನೇಕ ಸಮಸ್ಯೆಗಳಿಗೆ ಸ್ಪಂದಿಸಲು ಅಂಗನವಾಡಿ ಕೇಂದ್ರಗಳು ಅತ್ಯವಶ್ಯಕ ಎಂದರು.ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಲು ಸಣ್ಣಪುಟ್ಟ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅವಕಾಶವಿದೆ. ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡಲ್ಲಿ ಗ್ರಾಮೀಣ ಪ್ರದೇಶದ ಜನರು ಶಾಂತಿ ನೆಮ್ಮದಿಯಿಂದ ಸ್ವಾಭಿಮಾನದ ಬದುಕು ನಡೆಸಬಹುದು ಎಂದರು.
ಮಕ್ಕಳಿಗೆ ಎಲ್‌ಕೆಜಿ ಯುಕೆಜಿ ತರಗತಿಗೆ ಸಂಬಂಧಿಸಿದ ಗುಣಮಟ್ಟದ ಕಲಿಕೆಯನ್ನು ಚಿಕ್ಕಂದಿನಿಂದಲೇ ಅಭ್ಯಾಸ ಮಾಡಿಸಬೇಕೆಂಬ ಉದ್ದೇಶದಿಂದ ಮೊದಲ ಹಂತದಲ್ಲಿ ತಾಲೂಕಿನ 53 ಅಂಗನವಾಡಿ ಕೇಂದ್ರಗಳನ್ನು ಆಯ್ಕೆ ಮಾಡಿ ಸರ್ಕಾರದಿಂದ ಸ್ಮಾರ್ಟ್ ಟಿವಿಗಳನ್ನು ಪೂರೈಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ಸ್ಮಾರ್ಟ್ ಟಿವಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.ಇದಕ್ಕೂ ಮುನ್ನ ತಾಲೂಕಿನ ಬಿ.ಜಿ.ನಗರದಿಂದ ನಾಗಮಂಗಲ, ದೇವಲಾಪುರ, ಕೊಪ್ಪ ಮಾರ್ಗದ ಸಾರಿಗೆ ಬಸ್ ಸಂಚಾರಕ್ಕೆ ಸಚಿವರು ಚಾಲನೆ ನೀಡಿದರು. ಗ್ರಾಪಂ ಅಧ್ಯಕ್ಷೆ ಚಿಕ್ಕಬೋರಮ್ಮ, ಕೆಎಂಎಫ್ ನಿರ್ದೇಶಕ ಎನ್.ಅಪ್ಪಾಜಿಗೌಡ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್‌ಪಿಗಳಾದ ತಿಮ್ಮಯ್ಯ, ಗಂಗಾಧರಸ್ವಾಮಿ, ತಹಸೀಲ್ದಾರ್ ಜಿ.ಆದರ್ಶ, ಡಿವೈಎಸ್‌ಪಿ ಬಿ.ಚಲುವರಾಜು, ಸಿಡಿಪಿಒ ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ವಿಜಯೇಂದ್ರಮೂರ್ತಿ, ಟಿಎಪಿಸಿಎಂಎಸ್ ನಿರ್ದೇಶಕ ಎನ್.ಟಿ.ಕೃಷ್ಣಮೂರ್ತಿ, ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕ ಮಂಜುನಾಥ್, ಮುಖಂಡರಾದ ಮಾವಿನಕೆರೆ ಸುರೇಶ್, ಎಂ.ಹುಚ್ಚೇಗೌಡ, ಉದಯಕಿರಣ್, ಎನ್.ಕೆ.ವಸಂತಮಣಿ, ತಟ್ಟಹಳ್ಳಿ ನರಸಿಂಹಮೂರ್ತಿ, ಸಂಪತ್‌ಕುಮಾರ್, ಡಿ.ಕೆ.ಸುರೇಶ್, ಸಿಡಿಪಿಓ ಕಚೇರಿಯ ಮೇಲ್ವಿಚಾರಕಿ ರೂಪಾ ಸೇರಿದಂತೆ ಹಲವರು ಇದ್ದರು.