ಜನರಲ್ಲಿ ಸ್ವಚ್ಛತೆಯ ಅರಿವಿನ ದೃಢಸಂಕಲ್ಪ ಮಾಡಲು ಸ್ವಚ್ಛತಾ ಹೀ ಸೇವಾ ಆಂದೋಲನ ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.
ಕನ್ಡಡಪ್ರಭ ವಾರ್ತೆ ಚಾಮರಾಜನಗರ
ಜನರಲ್ಲಿ ಸ್ವಚ್ಛತೆಯ ಅರಿವಿನ ದೃಢಸಂಕಲ್ಪ ಮಾಡಲು ಸ್ವಚ್ಛತಾ ಹೀ ಸೇವಾ ಆಂದೋಲನ ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.ತಾಲೂಕಿನ ಹೆಬ್ಬಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಡದಹಳ್ಳಿ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿಂದು ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ, ಹೆಬ್ಬಸೂರು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಳ್ಳಂಡ ಸ್ವಚ್ಛತಾ ಹೀ ಸೇವಾ ಆಂದೋಲನದಲ್ಲಿ ದೇವಸ್ಥಾನದ ಸುತ್ತಮುತ್ತ ಹಾಗೂ ಪ್ರಾಚೀನ ಕಲ್ಯಾಣಿಯನ್ನು ‘ಒಂದು ದಿನ ಒಂದು ಗಂಟೆ ಎಲ್ಲಾರು ಒಟ್ಟಿಗೆ ಶ್ರಮದಾನ’ ಅಭಿಯಾನಕ್ಕೆ ಚಾಲನೆ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಗ್ರಾಮದ ಪರಿಸರ ಸ್ವಚ್ಛತೆಯಿಂದ ಪ್ರತಿಯೊಬ್ಬರು ಆರೋಗ್ಯಯುತ ಜೀವನ ಹಾಗೂ ಆರ್ಥಿಕ ಸದೃಢತೆಯನ್ನು ಹೊಂದಲು ಸಾಧ್ಯವಾಗುತ್ತದೆ. ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹೀ ಸೇವಾ-2026’ ಎಂಬ ವಿಶೇಷ ಜನಾಂದೋಲನವನ್ನು ಪ್ರತಿ ವರ್ಷ ಅ. 2 ರಂದು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸುವ ಉದ್ದೇಶದೊಂದಿಗೆ ಸ್ವಚ್ಛತಾ ಹೀ ಸೇವಾ ಆಂದೋಲನವನ್ನು 2017ರಿಂದ ಆಚರಿಸಲಾಗುತ್ತಿದೆ ಎಂದರು.ಈ ವರ್ಷವೂ ಸಹ ಸ್ವಚ್ಛ ಭಾರತ ಅಭಿಯಾನದ ಈ ಯೋಜನೆಯ ಸಾಧನೆಯ ಮೈಲಿಗಳನ್ನು ಗೌರವಿಸಲು, ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಸೆ.17 ರಿಂದ ಅ.2 ರವರೆಗೆ ಆಚರಿಸಲಾಗುತ್ತಿದ್ದು, ಪ್ರಸ್ತುತ ಸ್ವಚ್ಛತೆಯಲ್ಲಿ ಸಹಭಾಗಿತ್ವ ಸ್ವಚ್ಛ ಭಾರತ, ವಿಕಸಿತ ಭಾರತ ಎಂಬ ಘೋಷವಾಕ್ಯದೊಂದಿಗೆ ಅಭಿಯಾನ ಆಯೋಜಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ.ಶೃತಿ ಮಾತನಾಡಿ, ಮಹಾತ್ಮ ಗಾಂಧಿಜೀ ಯವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಸ್ವಚ್ಛ ಭಾರತ್ ದಿವಸವನ್ನು ಆಚರಿಸಲಾಗುತ್ತಿದೆ. ವಿವಿಧ ಸ್ವಚ್ಛತಾ ಚಟುವಟಿಕೆಗಳು ಅನೈರ್ಮಲ್ಯ ತಾಣಗಳ ಗುರುತಿಸುವಿಕೆ ಮತ್ತು ಸ್ವಚ್ಛಗೊಳಿಸುವಿಕೆ, ಶಾಲಾ ಮಕ್ಕಳಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.ಬಳಿಕ ಗ್ರಾಮದ ನಂದಿ ಬಸವೇಶ್ವರ ದೇವಸ್ಥಾನದ ಸುತ್ತ ಹಾಗೂ ಕಲ್ಯಾಣಿಯಲ್ಲಿ ಬೆಳೆದಿರುವ ಗಿಡ ಗಂಟಿಗಳು, ಪ್ರಾಸ್ಟಿಕ್ ಗಳನ್ನು ಶ್ರಮದಾನದ ಮೂಲಕ ತೆರವುಗೊಳಿಸಿ ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಗಿರಿಧರ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ವಿವಿಧ ಇಲಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿದ್ಯಾರ್ಥಿಗಳು, ಸ್ವ-ಸಹಾಯ ಗುಂಪುಗಳ ಮಹಿಳೆಯರು, ಇತರರು ಇದ್ದರು.