ವಿಕಲಚೇತನರು ಕಡ್ಡಾಯವಾಗಿ ಮತ ಚಲಾಯಿಸಿ: ಡಿಸಿ ನಿತೇಶ್ ಪಾಟೀಲ

| Published : Apr 19 2024, 01:09 AM IST

ವಿಕಲಚೇತನರು ಕಡ್ಡಾಯವಾಗಿ ಮತ ಚಲಾಯಿಸಿ: ಡಿಸಿ ನಿತೇಶ್ ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ಕಡ್ಡಾಯ ಮತದಾನ ಜಾಗೃತಿ ಜಾಥಾ ನಡೆಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿ 56 ಸಾವಿರ ವಿಶೇಷಚೇತನ ಅಂಗವಿಕಲ ಮತದಾರರು ಇದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ವಿಕಲಚೇತನ ಮತದಾರರ ನೋಂದಣಿಯನ್ನು ಮಾಡಿಕೊಳ್ಳಲಾಗಿದೆ. ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ವಿಶೇಷಚೇತನರು ಮತಗಟ್ಟೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ತಾಪಂ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಗುರುವಾರ ನಡೆದ ಕಡ್ಡಾಯ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷ ಚೇತನರ ಮತದಾನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ವಿಶೇಷ ಚೇತನ ಅಂಗವಿಕಲರು ಹಾಗೂ 85 ವರ್ಷ ಮೇಲ್ಪಟ್ಟವರು ಮನೆಯಲ್ಲಿ ಮತದಾನ ಮಾಡಲು ಏ.25 ಮತ್ತು 26 ರಂದು ಅವರ ಮೆನೆಗೆ ತೆರಳಿ ಪೋಸ್ಟಲ್ ಬ್ಯಾಲೆಟ್ ಮೂಲಕ ಮತ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

18 ಮತಕ್ಷೇತ್ರಗಳಲ್ಲಿ ಮತಗಟ್ಟೆ ಎಲ್ಲಾ ವಿಶೇಷಚೇತನ ಅಂಗವಿಕಲರಿಗೆ ಮತದಾನ ಮಾಡಲು ಮತಗಟ್ಟೆ ಸ್ಥಾಪಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಲ್ಲಾ ವಿಕಲಚೇತನರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳಿದರು.

ಬಳಿಕ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಆಯೋಜಿಲಾದ ಕಡ್ಡಾಯ ಮತದಾನ ಜಾಗೃತಿ ಅಭಿಯಾನಕ್ಕೆ ವಿಕಲಚೇತನರಿಂದ ಯಂತ್ರಚಾಲಿತ ದ್ವಿ-ಚಕ್ರ ವಾಹನ ಜಾಥಾಗೆ ಹಸಿರು ನಿಶಾನೆ ತೊರಿಸುವುದರ ಮುಲಕ ಚಾಲನೆ ನೀಡಿದರು.

ಚುನಾವಣೆ ಪರ್ವ ದೇಶದ ಗರ್ವ ನನ್ನ ಮತ ನನ್ನ ಹಕ್ಕು ನಿಮ್ಮ ಮತ ನಿಮ್ಮ ಭವಿಷ್ಯ, ಮತ ಚಲಾವಣೆ ನಿಮ್ಮ ಹಕ್ಕು ತಪ್ಪದೆ ನಿಮ್ಮ ಮತ ಚಲಾಯಿಸಿ ಎಂಬ ಘೋಷ ವಾಕ್ಯಗಳ ಮತದಾನ ಜಾಗೃತಿ ಫಲಕಗಳನ್ನು ವಿಕಲಚೇತನರಿಂದ ಪ್ರದರ್ಶಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಿಂದ ಪ್ರಾರಂಭವಾದ ಜಾಗೃತಿ ಜಾಥಾ ನಗರದ ಚನ್ನಮ್ಮ ವೃತ್ತದ ಮಾರ್ಗವಾಗಿ ಧರ್ಮವೀರ ಸಂಭಾಜಿ ವೃತ್ತದ ವರೆಗೆ ತಲುಪಿ ಸಮಾರೋಪಗೊಂಡಿತು.

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ರಾಯಭಾರಿ ರಾಘವೇಂದ್ರ ಅಣ್ವೇಕರ, ಮಹಾನಗರ ಪಾಲಿಕೆ ಆಯುಕ್ತ ಲೊಕೇಶ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಡಾ. ಕೃಷ್ಣರಾಜು, ಮುಖ್ಯ ಯೋಜನಾ ನಿರ್ದೇಶಕ ಗಂಗಾಧರ್ ದಿವಿಟರ, ಲೆಕ್ಕಾಧಿಕಾರಿ ಜಿ. ಹಿರೇಮಠ, ವಾರ್ತಾಧಿಕಾರಿ ಗುರುನಾಥ ಕಡಬೂರು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ ಮತ್ತು ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪೂರ, ಸವದತ್ತಿ, ರಾಮದುರ್ಗ ಮತ್ತು ಗೋಕಾಕ ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ ನೂರಾರು ವಿಕಲಚೇತನರು ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.