ಸಾರಾಂಶ
ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ತೊಂದರೆ ಕೊಡದೆ ಸುಗಮವಾಗಿ ಕೆಲಸ ನಡೆಯಲು ಸಹಕರಿಸಿ ಎಂದ ಅವರು, ರಸ್ತೆ ಒತ್ತುವರಿ ತೆರವುಗೊಳಿಸಿಕೊಳ್ಳಿ
ಹರಪನಹಳ್ಳಿ: ಅಭಿವೃದ್ಧಿ ಕಾಮಗಾರಿ ಕೆಲಸಗಳು ಸುಗಮವಾಗಿ ನಡೆಯಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಗುರುವಾರ 2024-25ನೇ ಸಾಲಿನ ರಾಜ್ಯ ಹೆದ್ದಾರಿ ಸುಧಾರಣೆ ಅಪೆಂಡಿಕ್ಸ್ ಯೋಜನೆಯಡಿ ₹4.50 ಕೋಟಿ ವೆಚ್ಚದಲ್ಲಿ ಗ್ರಾಮದ ಆಯ್ದ ಭಾಗಗಳಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಸರ್ಕಾರದ ವಿವಿಧ ಅನುದಾನದಡಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಇನ್ನು ಎರಡೂವರೆ ವರ್ಷ ಕಾಲವಕಾಶ ಇದ್ದು, ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು ಎಂದರು.ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ತೊಂದರೆ ಕೊಡದೆ ಸುಗಮವಾಗಿ ಕೆಲಸ ನಡೆಯಲು ಸಹಕರಿಸಿ ಎಂದ ಅವರು, ರಸ್ತೆ ಒತ್ತುವರಿ ತೆರವುಗೊಳಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಮುಖಂಡ ಎಚ್.ಎಂ. ಮಲ್ಲಿಕಾರ್ಜುನ ಸ್ವಾಮಿ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕುಬೇರಪ್ಪ, ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕ ರತ್ನಮ್ಮ ಅಶೋಕ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ತಾಪಂ ಮಾಜಿ ಸದಸ್ಯ ಮೈದೂರು ರಾಮಣ್ಣ, ಗ್ರಾಪಂ ಅಧ್ಯಕ್ಷೆ ಛಲವಾದಿ ಫಕೀರಮ್ಮ, ಎಪಿಎಂಸಿ ಮಾಜಿ ಅಧ್ಯಕ್ಷ ಅಶೋಕ, ಪಿಡಿಒ ಎಂ. ಪ್ರಕಾಶ, ಗ್ರಾಮ ಲೆಕ್ಕಾಧಿಕಾರಿ ಎಚ್. ಕವಿತಾ, ಎಇಇ ರಾಘವೇಂದ್ರ, ಗುತ್ತಿಗೆದಾರರಾದ ಮಂಜುನಾಥ ಬೋವಿ, ಸಂಪತ್ ಕುಮಾರ, ರಾಜಪ್ಪ, ಮತ್ತೂರು ಬಸವರಾಜ ಇತರರು ಇದ್ದರು.ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಗ್ರಾಮದ ಆಯ್ದ ಭಾಗಗಳಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಭೂಮಿಪೂಜೆ ನೆರವೇರಿಸಿ, ಸಭೆ ಉದ್ಘಾಟಿಸಿದರು.