ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಹಕಾರ ಸಪ್ತಾಹದ ಅಂಗವಾಗಿ ಸಂಘದ ಕಾರ್ಯವ್ಯಾಪ್ತಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ನಾಪೋಕ್ಲು: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಹಕಾರ ಸಪ್ತಾಹದ ಅಂಗವಾಗಿ ಸಂಘದ ಕಾರ್ಯವ್ಯಾಪ್ತಿಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಂಘದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ಸದಸ್ಯರ ಮನೆಗಳಿಗೆ ತೆರಳಿ, ಸಹಕಾರ ಸಂಘದ ವಿವಿಧ ಸಾಲಭ್ಯಗಳು, ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಹೊಸ ಸದಸ್ಯರನ್ನು ಸಂಘಕ್ಕೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲಪಾಡಿ ಚಾಲನೆ ನೀಡಿದರು. ಸಂಘದ ಉಪಾಧ್ಯಕ್ಷ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಜಯರಾಮ ನಿಡ್ಯಮಲೆ, ಧನಂಜಯ ಕೋಡಿ, ನಾರಣಪ್ಪ ಜತ್ತನ, ಶೇಷಪ್ಪ ಎನ್.ವಿ. ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು.