ನಿಷ್ಪಕ್ಷಪಾತದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ: ಪ್ರಕಾಶ ಕುದರಿ

| Published : Apr 09 2024, 12:45 AM IST

ನಿಷ್ಪಕ್ಷಪಾತದಿಂದ ಚುನಾವಣಾ ಕರ್ತವ್ಯ ನಿರ್ವಹಿಸಿ: ಪ್ರಕಾಶ ಕುದರಿ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಗಂಭೀರವಾಗಿ ತೆಗೆದುಕೊಂಡು ಸುಸೂತ್ರವಾಗಿ ನಡೆಸಲು ಸಹಕರಿಸಬೇಕು.

ಕನ್ನಡಪ್ರಭ ವಾರ್ತೆ ಯಾದಗಿರಿ

ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ನಿಷ್ಪಕ್ಷಪಾತ ಹಾಗೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವ ಮೂಲಕ ಚುನಾವಣಾ ಪ್ರಕ್ರಿಯೆಯನ್ನು ಗಂಭೀರವಾಗಿ ತೆಗೆದುಕೊಂಡು ಸುಸೂತ್ರವಾಗಿ ನಡೆಸಲು ಸಹಕರಿಸಬೇಕು ಎಂದು ಸಹಾಯಕ ಆಯುಕ್ತ ಹಾಗೂ ಸಹಾಯಕ ಚುನಾವಣಾಧಿಕಾರಿ ಪ್ರಕಾಶ ಕುದರಿ ಅವರು ಸೂಚಿಸಿದರು.

ಯಾದಗಿರಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತಗಟ್ಟೆ ಅಧಿಕಾರಿಗಳಾದ ಪಿಆರ್‌ಓ ಹಾಗೂ ಎಪಿಆರ್‌ಓಗಳಿಗೆ ಏರ್ಪಡಿಸಿದ್ದ ಚುನಾವಣೆ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮತದಾನದ ವೇಳೆ ಮತದಾರರಿಗೆ ಯಾವುದೇ ಅಡತಡೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಪೂರ್ವಭಾವಿಯಾಗಿ ಎರಡು ಹಂತದ ತರಬೇತಿ ನೀಡಲಾಗುತ್ತಿದ್ದು, ಇದು ಮೊದಲ ಹಂತವಾಗಿದೆ. ಅಧಿಕಾರಿಗಳಿಗೆ ಮತಯಂತ್ರಗಳ ಮಾದರಿ, ಬಳಕೆ ಮಾಡುವ ವಿಧಾನ ಕುರಿತು ನುರಿತ ತಜ್ಞರು ತರಬೇತಿ ನೀಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಯಾದಗಿರಿ ತಹಸೀಲ್ದಾರ ಯಲ್ಲಪ್ಪ, ವಡಿಗೇರಾ ತಹಸೀಲ್ದಾರ ವಿಜಯಕುಮಾರ, ಜಿಲ್ಲಾ ಮಟ್ಟದ ತರಬೇತುದಾರ ಡಾ.ಸುಭಾಶ್ಚಂದ್ರ ಕೌಲಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಶೆಟ್ಟಿ, ತಾಲೂಕು ತರಬೇತುದಾರ ಹಫೀಜ್ ಪಟೇಲ್ , ಶಿರಸ್ತೆದಾರ ಮಲ್ಲಿಕಾರ್ಜುನ ತಂಗಡಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.