ಸಾರಾಂಶ
Performance by the featured art groups
ರಾಯಚೂರು: ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ಪ್ರಯುಕ್ತ ನಗರದಲ್ಲಿ ಕಲಾ ತಂಡಗಳ ಮೆರವಣಿಗೆ ನಡೆಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಯಚೂರು ಜಿಲ್ಲಾಡಳಿತದಿಂದ ಕಾರ್ಯಕ್ರಮದಲ್ಲಿ ಸ್ಥಳೀಯ ಬಸವೇಶ್ವರ ವೃತ್ತದಿಂದ ಕೃಷಿ ವಿವಿವರೆಗೆ ನಡೆದ ಮೆರವಣಿಗೆಗೆ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ ಪಾಟೀಲ್ ಅವರು ಡೊಳ್ಳು ಬಾರಿಸುವುದರ ಮುಖಾಂತರ ಚಾಲನೆ ನೀಡಿದರು.ಮುಖ್ಯ ರಸ್ತೆಯುದ್ದಕ್ಕು ಸಾಗಿದ ಮೆರವಣಿಗೆಯಲ್ಲಿ ಕುಂಭ-ಕಳಸದ ಜೊತೆಗೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು ನೀಡಿದ ಪ್ರದರ್ಶನ ಗಮನ ಸೆಳೆಯಿತು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್, ಎಂಎಲ್ಸಿ ಎ.ವಸಂತಕುಮಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್, ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.-----------------------
05ಕೆಪಿಆರ್‌ಸಿಆರ್ 11: ರಾಯಚೂರಿನಲ್ಲಿ ಗೋಕಾಕ್ ಚಳವಳಿಯ ಹಿನ್ನೋಟ- ಮುನ್ನೋಟ ಕಾರ್ಯಕ್ರಮದ ನಿಮಿತ್ತ ಕಲಾತಂಡಗಳ ಮೆರವಣಿಗೆಗೆ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಚಾಲನೆ ನೀಡಿದರು.