ಕ್ರೀಡೆಯಲ್ಲಿ ಸಾಧನೆ ಮಕ್ಕಳಿಗೆ ಭವಿಷ್ಯದಲ್ಲಿ ಉದ್ಯೋಗವಕಾಶ: ರವಿಕುಮಾರ್

| Published : Aug 09 2024, 12:37 AM IST

ಕ್ರೀಡೆಯಲ್ಲಿ ಸಾಧನೆ ಮಕ್ಕಳಿಗೆ ಭವಿಷ್ಯದಲ್ಲಿ ಉದ್ಯೋಗವಕಾಶ: ರವಿಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಒಲಂಪಿಕ್ಸ್ ಹಾಗೂ ಏಷಿಯನ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಚಿನ್ನ, ಹಣ ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಿವೆ. ಹೀಗಾಗಿ ಕ್ರೀಡೆಯಲ್ಲಿ ಪಾಲ್ಗೊಂಡು ಮಕ್ಕಳು ಕ್ರೀಡಾ ಮನೋಭಾವನೆಯಿಂದ ಆಟವಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿದ ಮಕ್ಕಳಿಗೆ ಭವಿಷ್ಯದಲ್ಲಿ ವಿಪುಲವಾದ ಉದ್ಯೋಗಾವಕಾಶಗಳಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಕುಮಾರ್ ಹೇಳಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಟೌನ್ ವೃತ್ತದ ಕ್ರೀಡಾಕೂಟ ಉದ್ಘಾಟಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಒಲಂಪಿಕ್ಸ್ ಹಾಗೂ ಏಷಿಯನ್ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಚಿನ್ನ, ಹಣ ಹಾಗೂ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಿವೆ. ಹೀಗಾಗಿ ಕ್ರೀಡೆಯಲ್ಲಿ ಪಾಲ್ಗೊಂಡು ಮಕ್ಕಳು ಕ್ರೀಡಾ ಮನೋಭಾವನೆಯಿಂದ ಆಟವಾಡಬೇಕು ಎಂದರು.

ಈ ವೇಳೆ ಸದಸ್ಯರಾದ ಹೇಮಂತ್ ಕುಮಾರ್, ಸ್ವಾಮಿ, ಮುಖ್ಯ ಶಿಕ್ಷಕ ಮಂಜುನಾಥ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಮಂಜುನಾಥ್, ಮಾಜಿ ಅಧ್ಯಕ್ಷ ಕೆ.ಚಂದ್ರಶೇಖರ್ (ಗಡ್ಡ), ಶಿಕ್ಷಕರ ಪ್ರತಿಭಾ ಪರಿಷತ್ ಜಿಲ್ಲಾಧ್ಯಕ್ಷ ಸುರೇಂದ್ರಕುಮಾರ್, ಶಿಕ್ಷಣ ಸಂಯೋಜಕಿ ಎಸ್.ವೈ.ಅನಿತಾ ದೈಹಿಕ ಶಿಕ್ಷಣ ಪರಿವೀಕ್ಷಕ ಮಾದೇಶ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ್, ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಸಿ.ಮಹೇಶ್, ಪತ್ರಕರ್ತ ಎನ್.ಕೃಷ್ಣೇಗೌಡ ಇತರರಿದ್ದರು.ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಹಲಗೂರು:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಲಗೂರು ಹೋಬಳಿ ಮಟ್ಟದ 2024-25ನೇ ಸಾಲಿನ ಎರಡು ದಿನಗಳ ಕ್ರೀಡಾಕೂಟಕ್ಕೆ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.

ಶಿಕ್ಷಣ ಸಂಯೋಜಕ ರವಿಕುಮಾರ್ ಮಾತನಾಡಿ, ಸೋಲು ಗೆಲುವು ಸಹಜ. ಕ್ರೀಡಾ ಮನೋಭಾವದಿಂದ ಎಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ತೀರ್ಪುಗಾರರು ನಿಷ್ಪಕ್ಷಪಾತವಾಗಿ ತೀರ್ಪು ನೀಡಬೇಕು ಎಂದರು.ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಮಾತನಾಡಿ, ಶೈಕ್ಷಣಿಕ ಇತರ ದೃಷ್ಟಿಯಿಂದ ಸರ್ಕಾರ ಕ್ರೀಡಾಕೂಟ ಆಯೋಜಿಸಿದೆ. ದೈಹಿಕವಾಗಿ ಸದೃಢವಾಗಿದ್ದರೆ ಶೈಕ್ಷಣಿಕವಾಗಿ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಅಂತಹ ವ್ಯಕ್ತಿ ನಮ್ಮ ದೇಶದ ಆಸ್ತಿ ಎಂದರು.

ಗ್ರಾಪಂ ಅಧ್ಯಕ್ಷೆ ರಕ್ಷಿತಾ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಕೂಟದಲ್ಲಿ 30 ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಶುಕ್ರವಾರ ನಡೆಯುವ ವಿದ್ಯಾರ್ಥಿನಿಯರ ಕ್ರೀಡಾಕೂಟದಲ್ಲಿ ಸಹ 30 ಶಾಲಾ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಶಿಕ್ಷಣ ಸಂಯೋಜಕರಾದ ಜಿ.ಎಸ್.ಕೃಷ್ಣ ತಿಳಿಸಿದರು.ಕಾರ್ಯಕ್ರಮದಲ್ಲಿ ರಕ್ಷಿತಾ ಜೀವನ್, ಲತಾ ಮಹದೇವ, ಮಹಾದೇವ, ಮಲ್ಲಿಕಾರ್ಜುನ, ನಾಗೇಶ್, ನಾಗರತ್ನ, ರವೀಶ್, ದಾಸೇಗೌಡ, ಎ. ಎಸ್. ದೇವರಾಜು, ರವಿ ಕುಮಾರ್, ರವೀಂದ್ರ, ಕೃಷ್ಣ, ಕುಳ್ಳಯ್ಯ ಹಾಜರಿದ್ದರು.