ಚಿಕ್ಕಮಗಳೂರುದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡುವ ಅಂಗಡಿ ಮಾಲೀಕರು ಹಾಗೂ ಮಾರಾಟಗಾರರು ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕು. ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ನಿಯಮ ಉಲ್ಲಂಘಿ ಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 223ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಅಂಗಡಿ ಮಾಲೀಕರಿಗೆ ಜಿಲ್ಲಾ ಪೊಲೀಸ್ ಸೂಚನೆಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡುವ ಅಂಗಡಿ ಮಾಲೀಕರು ಹಾಗೂ ಮಾರಾಟಗಾರರು ಕಡ್ಡಾಯವಾಗಿ ಸುರಕ್ಷತಾ ನಿಯಮ ಪಾಲಿಸಬೇಕು. ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ನಿಯಮ ಉಲ್ಲಂಘಿ ಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 223ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ಪಟಾಕಿ ಅಂಗಡಿ ಮಾಲೀಕರು ಮತ್ತು ಮಾರಾಟಗಾರರ ಸಭೆ ನಡೆಸಿ ಅಗತ್ಯ ಮಾರ್ಗಸೂಚಿ ತಿಳಿಸಲಾಯಿತು.ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ಮಾರ್ಗಸೂಚಿಗಳಂತೆ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರಿಂದ ಮಾತ್ರ ಹಸಿರು ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಬೇಕು. ಪಟಾಕಿ ಬಾಕ್ಸ್ಗಳ ಮೇಲೆ ಕಡ್ಡಾಯವಾಗಿ ಬಾರ್ಕೋಡ್ ಲೋಗೋ ಇರಬೇಕು. ಜಿಲ್ಲಾಧಿಕಾರಿಗಳ ಪರವಾನಗಿಯಲ್ಲಿ ನಮೂದಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಅಂಗಡಿಗಳನ್ನು ತೆರೆಯಬೇಕು. ಪರವಾನಗಿ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು.ಪಟಾಕಿ ಅಂಗಡಿಗಳು ಪರಸ್ಪರ ಕನಿಷ್ಠ 3 ಮೀ. ಅಂತರದಲ್ಲಿರಬೇಕು. ಅಂಗಡಿಗಳ ಗಾತ್ರ 10x10 ಅಡಿಗೆ ಸೀಮಿತ ವಾಗಿರಬೇಕು. ಸುಲಭವಾಗಿ ಬೆಂಕಿ ಹತ್ತಿಕೊಳ್ಳದ ಸಾಮಗ್ರಿಗಳಿಂದ ಮಳಿಗೆ ನಿರ್ಮಿಸಬೇಕು. ಪ್ರತಿಯೊಂದು ಅಂಗಡಿಯಲ್ಲಿ 9 ಲೀ. ಸಾಮರ್ಥ್ಯದ ಅಗ್ನಿಶಾಮಕ ಉಪಕರಣ, ಎರಡು ಬಕೆಟ್ ನೀರು ಹಾಗೂ ಪಕ್ಕದಲ್ಲಿ ಕನಿಷ್ಠ 400 ಲೀ. ನೀರು ಸಂಗ್ರಹಿಸಿ ಡಬೇಕು. ಅಂಗಡಿಗಳ ಮುಂಭಾಗ ಮತ್ತು ಹಿಂಭಾಗದಲ್ಲಿ ಪ್ರವೇಶ ವ್ಯವಸ್ಥೆ ಕಲ್ಪಿಸಬೇಕು.ರಸ್ತೆಯಿಂದ ಕನಿಷ್ಠ 50 ಮೀ. ದೂರದಲ್ಲಿ ಹಾಗೂ ಜನವಸತಿ ಪ್ರದೇಶ, ಬಸ್ ನಿಲ್ದಾಣ, ಪೆಟ್ರೋಲ್ ಬಂಕ್ ಮತ್ತು ವಿದ್ಯುತ್ ಪರಿವರ್ತಕಗಳಿಂದ ದೂರವಿರುವ ಸುರಕ್ಷಿತ ಬಯಲು ಪ್ರದೇಶಗಳಲ್ಲಿ ಅಂಗಡಿಗಳನ್ನು ಸ್ಥಾಪಿಸಬೇಕು. ಅಂಗಡಿಗಳಲ್ಲಿ ಅಡುಗೆ, ಧೂಮಪಾನ ಹಾಗೂ ರಾತ್ರಿ ವಾಸ್ತವ್ಯಕ್ಕೆ ಅವಕಾಶವಿಲ್ಲ. ಪೆಟ್ರೋಲ್, ಡೀಸೆಲ್ನಂತಹ ದಹನಶೀಲ ವಸ್ತುಗಳನ್ನು ಇಡಬಾರದು. ವಿದ್ಯುತ್ ಸಂಪರ್ಕದ ತಂತಿಗಳು ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.20ಕ್ಕಿಂತ ಹೆಚ್ಚು ಪಟಾಕಿ ಅಂಗಡಿಗಳಿದ್ದಲ್ಲಿ ಸಮೀಪ ಅಗ್ನಿಶಾಮಕ ವಾಹನವನ್ನು ಕಡ್ಡಾಯವಾಗಿ ನಿಯೋಜಿಸಬೇಕು. ವಿದೇಶಿ ಪಟಾಕಿಗಳ ಸಾಗಣೆ ಮತ್ತು ಮಾರಾಟಕ್ಕೆ ಅವಕಾಶವಿಲ್ಲ. ಪಟಾಕಿ ಮಾರಾಟಗಾರರು ಜಿಎಸ್ಟಿ ನೋಂದಣಿ ದೃಢೀಕರಣ ಪತ್ರ ಹೊಂದಿರಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು.ಸುರಕ್ಷತಾ ಕ್ರಮಗಳನ್ನು ಪಾಲಿಸದ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಯಾವುದೇ ಅವಘಡ ಸಂಭವಿಸಿದಲ್ಲಿ ಸಂಬಂಧಪಟ್ಟ ಪರವಾನಗಿದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ನಂಜುಂಡೇಗೌಡ, ಅಗ್ನಿಶಾಮಕ ಅಧಿಕಾರಿ ಪ್ರವೀಣ್ ಕೆ.ಎನ್., ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಭವ್ಯ, ನಗರಸಭೆ ಪರಿಸರ ಅಧಿಕಾರಿ ವೆಂಕಟೇಶ್, ಮೆಸ್ಕಾಂ ಎಇಇ ನಂದೀಶ್, ಯೋಜನಾ ನಿರಾಶ್ರಿತ ಇಲಾಖೆಯ ಗೋಪಾಲ್ ಜಾದವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪಟಾಕಿ ಅಂಗಡಿ ಮಾಲೀಕರು ಉಪಸ್ಥಿತರಿದ್ದರು.
