ಪ್ರಾಸಿಕ್ಯೂಷನ್ ಗೆ ಅನುಮತಿ ಸಂವಿಧಾನಕ್ಕೆ ವಿರುದ್ಧ: ಟಿ.ಡಿ.ರಾಜೇಗೌಡ

| Published : Aug 20 2024, 12:52 AM IST

ಪ್ರಾಸಿಕ್ಯೂಷನ್ ಗೆ ಅನುಮತಿ ಸಂವಿಧಾನಕ್ಕೆ ವಿರುದ್ಧ: ಟಿ.ಡಿ.ರಾಜೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ನರಸಿಂಹರಾಜಪುರ, ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನಬಾಹಿರವಾಗಿದ್ದು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಂಡು ಸಂವಿಧಾನ ಉಳಿಸುವ ಕೆಲಸ ಮಾಡಲಿ ಎಂದು ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದರು.

ಅಂಬೇಡ್ಕರ್ ವೃತ್ತದಲ್ಲಿ ಕಾಂಗ್ರೆಸ್‌ ಪ್ರತಿಭಟನೆ । ಮಾನವ ಸರಪಳಿ- ಟೈರ್ ಸುಟ್ಟು ಆಕ್ರೋಶ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನಬಾಹಿರವಾಗಿದ್ದು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಂಡು ಸಂವಿಧಾನ ಉಳಿಸುವ ಕೆಲಸ ಮಾಡಲಿ ಎಂದು ಶಾಸಕ ಟಿ.ಡಿ.ರಾಜೇಗೌಡ ಆಗ್ರಹಿಸಿದರು.ಸೋಮವಾರ ಸಂಜೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ಘಟಕದಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸರ್ಕಾರ ಅಸ್ಥಿರ ಗೊಳಿಸುವ ಪ್ರಯತ್ನ ಮಾಡುತ್ತಿವೆ. ಬಡವರು, ಶೋಷಿತ ಪರ ಕಾಂಗ್ರೆಸ್ ಜಾರಿಗೊಳಿಸಿರುವ ಕಾರ್ಯಕ್ರಮ ಸಹಿಸದೆ ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ಧನ್ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದೆ ಪಕ್ಷಪಾತಿಯಾಗಿ ವರ್ತಿಸಿದ್ದಾರೆಂದು ದೂರಿದರು.

ರಾಜ್ಯಪಾಲರು ಬಿಜೆಪಿ ಏಜೆಂಟರಂತೆ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಪರವಾಗಿ ಕಾಂಗ್ರೆಸ್ ನ ಎಲ್ಲಾ 136 ಶಾಸಕರು ಇದ್ದು ಅವರು ರಾಜೀನಾಮೆ ನೀಡುವುದಿಲ್ಲ ಎಂದರು.ಕಾಡಾ ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ರಾಜ್ಯದಲ್ಲಿ 136 ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಆಪರೇಷನ್ ಕಮಲ ಸಾಧ್ಯವಾಗದೆ ಬಿಜೆಪಿ ರಾಜ್ಯಪಾಲರನ್ನು ಸಾಮಾನ್ಯ ಕಾರ್ಯಕರ್ತರಂತೆ ನಡೆಸಿಕೊಂಡು ರಾಜಭವನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ . ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಮೊಕದ್ದಮೆ ಇಲ್ಲದ ವಿಷಯ ಮೊಕದ್ದಮೆ ಪರಿವರ್ತಿಸಿ ಸಿದ್ದರಾಮಯ್ಯ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ. ಬಡವಾಳ ಶಾಹಿಗಳ ಪರವಾದ ಬಿಜೆಪಿ ಜನಸಾಮಾನ್ಯರ ಪರ ಕಾರ್ಯಕ್ರಮ ರೂಪಿಸಿದ ಕಾಂಗ್ರೆಸ್ ನ್ನು ಸಹಿಸದೆ ಸರ್ಕಾರ ಅಸ್ಥಿತರಗೊಳಿಸಲು ಪ್ರಯತ್ನಿಸುತ್ತಿದೆ.

ಕಾಂಗ್ರೆಸ್ ಪಕ್ಷದ ಮುಖಂಡರಾದ ಎಂ.ಆರ್.ರವಿಶಂಕರ್, ಪ್ರಶಾಂತ್ ಶೆಟ್ಟಿ, ಬಿ.ಎಸ್.ಸುಬ್ರಹ್ಮಣ್ಯ ಮಾತನಾಡಿದರು. ಸುಂದರೇಶ್, ಸುನಿಲ್ ಕುಮಾರ್, ಜುಬೇದಾ,ಎಲ್ದೋಸ್, ಈ.ಸಿ.ಜೋಯಿ, ಅಂಜುಮ್, ಅಹಿಂದಾ ರಾಜ್ಯ ಸಮಿತಿಯ ಭವಾನಿ, ವೆಂಕಟೇಶ್,ನಂದೀಶ್, ಸೈಯದ್ ವಸೀಂ, ಸಿಗ್ಬತುಲ್ಲಾ ಮತ್ತಿತರರಿದ್ದರು. ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು. ಟಯರ್ ಸುಟ್ಟು ರಾಜ್ಯಪಾಲರ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನವಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಯಿತು.