ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
KannadaprabhaNewsNetwork | Published : Oct 20 2023, 01:00 AM IST
ಲಿಯೋ ಚಿತ್ರ ಪ್ರದರ್ಶನಕ್ಕೆ ಅನುಮತಿ ಖಂಡನೀಯ
ಸಾರಾಂಶ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು.
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವ ಜೊತೆಗೆ ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ ಮುಂದುವರಿದಿದ್ದು 15ನೇ ದಿನದ ಹೋರಾಟಕ್ಕೆ ಪಟ್ಟಣದ ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಬೆಂಬಲಿಸಿದರು. ನಗರದ ಅಂಚೆ ಕಚೇರಿ ರಸ್ತೆಯ ಕಾವೇರಿ ಸರ್ಕಲ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಕಾವೇರಿ ನೀರು ಹಂಚಿಕೆ ಸಮಸ್ಯೆ ತಲೆದೋರಿರುವ ವೇಳೆ ರಾಜ್ಯದಲ್ಲಿನ ಚಿತ್ರಮಂದಿರಗಳಲ್ಲಿ ತಮಿಳಿನ ಲಿಯೋ ಚಿತ್ರ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿರುವುದು ನಾಚಿಕೆಗೇಡಿನ ವಿಷಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಜನರಿಗೆ ಕುಡಿಯುವ ನೀರಿಲ್ಲದಿದ್ದರೂ ತಮಿಳುನಾಡಿನ ಕೃಷಿಗೆ ನೀರು ಪಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ತಮಿಳು ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡಿರುವುದು ಖಂಡನೀಯ. ರಾಜ್ಯ ಸಿನಿಮಾ ವಿತರಕರು ಮತ್ತು ಚಿತ್ರಮಂದಿರಗಳ ಮಾಲೀಕರಿಗೆ ಸ್ವಾಭಿಮಾನ ಇದ್ದರೆ ಈ ಕೂಡಲೆ ಚಿತ್ರ ಪ್ರದರ್ಶನ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಕಾವೇರಿ ನೀರನ್ನು ಉಳಿಸಿಕೊಳ್ಳಲು ರಾಜ್ಯಾದ್ಯಂತ ಹೋರಾಟಗಾರರು, ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ರಾಜ್ಯ ಸರ್ಕಾರ 1 ಸಾವಿರ ಚಿತ್ರಮಂದಿರದಲ್ಲಿ ತಮಿಳು ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ. ಕನ್ನಡಪರ ಐಟಿಐ ಕಾಲೇಜಿನ ಪ್ರಾಂಶುಪಾಲ ಕೆಂಚೇಗೌಡ ಮಾತನಾಡಿ, ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವುದು ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವ ವಿಚಾರದಲ್ಲಿ ಕಕಜವೇ ಹಮ್ಮಿಕೊಂಡಿರುವ ಪ್ರತಿಜ್ಞೆಯ ಹೋರಾಟ.... ಶ್ಲಾಘನೀಯ. ವೇದಿಕೆಯ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು. ಈ ವೇಳೆ ಕಕಜವೇ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್‌ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ಆಟೋ ಘಟಕದ ಅಧ್ಯಕ್ಷ ಸಿದ್ದಪ್ಪಾಜಿ, ಸುಧಾಕರ್ ಚಿಕ್ಕೇನಹಳ್ಳಿ, ಚಿನ್ಮಯ್, ತರಬೇತುರಾದ ಅಶೋಕ್, ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು. ಬಾಕ್ಸ್......... ಲಿಯೋ ಚಿತ್ರಪದರ್ಶನ ರದ್ದು ನಗರದ ಮಂಗಳವಾರಪೇಟೆಯಲ್ಲಿನ ಬಾಲಾಜಿ ಚಿತ್ರಮಂದಿರದಲ್ಲಿ ಏರ್ಪಡಿಸಿದ್ದ ಲಿಯೋ ಚಲನಚಿತ್ರದ ಪ್ರದರ್ಶನ ರದ್ದು ಪಡಿಸಲಾಯಿತು. ಗುರುವಾರ ನಗರದ ಕಾವೇರಿ ಸರ್ಕಲ್‌ನಲ್ಲಿ ಪ್ರತಿಭಟನೆಯ ನಡೆಸಿದ ನಂತರ ಬಾಲಾಜಿ ಚಿತ್ರಮಂದಿರಕ್ಕೆ ತೆರಳಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಲಿಯೋ ಸಿನಿಮಾನದ ಪ್ರದರ್ಶ ರದ್ದುಪಡಿಸುವಂತೆ ಚಿತ್ರಮಂದಿರದ ಮಾಲೀಕರಿಗೆ ಮನವಿ ಮಾಡಿದರು. ಇದಕ್ಕೆ ಚಿತ್ರಮಂದಿರದ ಮಾಲೀಕರು, ಈಗಾಗಲೇ ಟಿಕೆಟ್ ಬುಕ್ ಮಾಡಲಾಗಿದೆ. ಏಕಾಏಕಿ ಚಿತ್ರಪ್ರದರ್ಶನ ರದ್ದು ಮಾಡಿದರೆ ಪ್ರೇಕ್ಷಕರು ಗಲಾಟೆ ಮಾಡುತ್ತಾರೆಂದು ಅಳಲು ತೋಡಿಕೊಂಡರು. ಆದರೆ, ವೇದಿಕೆ ಕಾರ್ಯಕರ್ತರು ಇದಕ್ಕೆ ಒಪ್ಪದೇ ಯಾವುದೇ ಕಾರಣಕ್ಕೂ ಚಿತ್ರ ಪ್ರದರ್ಶನ ಮಾಡದಂತೆ ಪಟ್ಟು ಹಿಡಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪುರಪೊಲೀಸ್ ಠಾಣೆ ಪಿಎಸ್‌ಐ ಹರೀಶ್ ಮಧ್ಯಸ್ಥಿಕೆ ವಹಿಸಿ ಸಂಧಾನ ನಡೆಸಿದರು. ಆ ನಂತರ ಲಿಯೋ ಚಿತ್ರದ ಪ್ರದರ್ಶವನ್ನು ರದ್ದುಗೊಳಿಸಿ ಕನ್ನಡ ಚಿತ್ರವನ್ನು ಪ್ರದರ್ಶಿಸಲಾಯಿತು. ಪೊಟೋ೧೯ಸಿಪಿಟಿ೧: ಕಾವೇರಿ ಸಂಕಷ್ಟ ಸೂತ್ರಕ್ಕೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ಹೋರಾಟದಲ್ಲಿ ಐಟಿಐ ವಿದ್ಯಾರ್ಥಿಗಳು ಭಾಗವಹಿಸಿದರು.