ಸಾರಾಂಶ
ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ.
ಕುಣಿಗಲ್ : ತಾಲೂಕಿನ ಯಡಿಯೂರು ಹೋಬಳಿಯ ನಾಗೇಗೌಡನ ಪಾಳ್ಯದ ದಲಿತ ಬಾಲಕಿ ಸುಮಾ (16) ಳನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಮುಸಲ್ಮಾನ ಯುವಕನ ಉಪಟಳದಿಂದ ಬೇಸತ್ತು ನೇಣಿಗೆ ಶರಣಾದ ಘಟನೆ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಸುಮಾ ಕುಣಿಗಲ್ ಪಟ್ಟಣದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮುಸಲ್ಮಾನ ಸೈಯದ್ (19) ಎಂಬ ಯುವಕ ಪ್ರೀತಿಗಾಗಿ ಆಕೆಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕಳೆದ ಕೆಲವು ದಿನಗಳ ಹಿಂದೆ ಕುಣಿಗಲ್ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಮತ್ತು ಮಹಾತ್ಮ ಗಾಂಧಿ ಪ್ರೌಢಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿದ್ದ, ಈ ಘಟನೆಯಿಂದ ಮನನೊಂದ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿನ ನಂತರ ಘಟನೆ ಪೋಷಕರಿಗೆ ತಿಳಿದು ಅವರು ಅಮೃತೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.