ಪಠ್ಯೇತರ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ

| Published : Jul 13 2025, 01:18 AM IST

ಸಾರಾಂಶ

ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡುಗುವುದರಿಂದ ವ್ಯಕ್ತಿತ್ವ ವಿಕಸನ

ಕನ್ನಡಪ್ರಭ ವಾರ್ತೆ ಬೀಳಗಿ

ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಸಲುವಾಗಿ ಶಿಕ್ಷಕರು ಹಲವು ರೀತಿಯ ಚಟುವಟಿಕೆಗಳಲ್ಲಿ ಕಾರ್ಯ ಪ್ರವೃತ್ತರಾಗಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡುಗುವುದರಿಂದ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಮತ್ತು ಸ್ಪಧಾತ್ಮಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳು ಬೆಳಸಲು ಸಹಕಾರಿಯಾಗಲಿದೆ ಎಂದು ಮಾಜಿ ಸಚಿವರು ಹಾಗೂ ಎಸ್.ಆರ್.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಎಸ್.ಆರ್.ಪಾಟೀಲ ಹೇಳಿದರು.

ಸ್ಥಳೀಯ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶನಿವಾರ ನಡೆದ 2025-26ನೇ ಸಾಲಿನ ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕೆ ಜತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗವಾಗಿವೆ. ಎಂ.ಎನ್.ಪಾಟೀಲರು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಶಿಕ್ಷಣ ಸಂಸ್ಥೆ ತೆರೆಯುವ ಮನಸ್ಸು ಮಾಡಿದ ವ್ಯಕ್ತಿಯಾಗಿದ್ದಾರೆ. ಸ್ವಾಮಿ ವಿವೇಕಾನಂದ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಹೆಸರಿನಲ್ಲಿ ಶಿಕ್ಷಣ ಸಂಸ್ಥೆ ತೆರೆದಿದ್ದಾರೆ. ಕೆಜಿಯಿಂದ ಪಿಜಿಯವರೆಗೆ ಶಿಕ್ಷಣ ನೀಡುವ ಬೃಹತ್ ಕಟ್ಟಡದಲ್ಲಿ ಎಲ್ಲ ಮೂಲಭೂತ ಸೌಲಭ್ಯವುಳ್ಳ ಉತ್ತರ ಕರ್ನಾಟಕದ ಹೆಮ್ಮೆಯ ವಿದ್ಯಾ ಸಂಸ್ಥೆ ತರೆದು ಶೈಕ್ಷಣಿಕ ರಂಗದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದಾರೆ. ಈ ಭಾಗದ ವಿದ್ಯಾರ್ಥಿಗಳ ಪಾಲಿಗೆ ಜ್ಞಾನದ ಜ್ಯೋತಿ ಬೆಳೆಸುವ ಕಾರ್ಯ ಮಾಡಿದಲ್ಲದೇ ಬಾಡಗಂಡಿಯ ಎಸ್.ಆರ್.ಪಾಟೀಲ ಪ್ರತಿಷ್ಠಾನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಅವರು ಈ ಎರಡು ಸಂಸ್ಥೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.

ವಿಪ ಶಾಸಕ ಪಿ.ಎಚ್.ಪೂಜಾರಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಎಂ.ಎನ್.ಪಾಟೀಲರು ತಮ್ಮ 1993ರಲ್ಲಿ ಪ್ರಾರಂಭವಾದ ಶಿಕ್ಷಣ ಸಂಸ್ಥೆಯು ಇಂದು ಸಾವಿರಾರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಏಕೈಕ ಶಿಕ್ಷಣ ಸಂಸ್ಥೆಯಾಗಿದೆ. ಇಲ್ಲಿ ವಿದ್ಯಾಬ್ಯಾಸ ಮಾಡಿದ ಮಕ್ಕಳು ರಾಜ್ಯ. ಅಂತಾರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ತೊರಿಸುವುದಲ್ಲದೇ ಶಿಕ್ಷಣ ರಂಗದಲ್ಲಿ ಬದಲಾವಣೆ ತಂದು ಇಲ್ಲಿಯ ಕಲಿಯುವ ಮಕ್ಕಳು ಪರೀಕ್ಷೆಗಳನ್ನು ಧೈರ್ಯವಾಗಿ ಎದುರುಸಿ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆಯುವ ಮೂಲಕ ಈ ಸಂಸ್ಥೆ ಕೀರ್ತಿ ಹೆಚ್ಚಿಸಿದ್ದಾರೆ. ಇಲ್ಲಿ ಮಕ್ಕಳ ಕಲಿಕೆ ಮತ್ತು ಅವರಲ್ಲಿ ಇರುವ ನಯ-ವಿನಯ, ಶಿಸ್ತು ಮತ್ತು ಸಮಯ ಪ್ರಜ್ಞೆ ನೋಡಿದರೆ ಗೊತ್ತಾಗುತ್ತದೆ. ಎಂ.ಎನ್.ಪಾಟೀಲ ಶಿಕ್ಷಣ ಸಂಸ್ಥೆಯು ರಾಜ್ಯದಲ್ಲಿ ಒಂದು ಮಾದರಿ ಶಿಕ್ಷಣ ಸಂಸ್ಥೆಯಾಗಲಿದೆ ಎಂದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಎಂ.ಎನ್.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಶಿಕ್ಷಣ ಸಂಸ್ಥೆ ಬೆಳೆಯಲು ಈ ಭಾಗದ ಜನರ ಆಶೀರ್ವಾದ ಹಾಗೂ ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಮತ್ತು ಎಲ್ಲ ಸಿಬ್ಬಂದಿ ಸಹಕಾರದಿಂದ ಸಾಧ್ಯವಾಗಿದೆ ಎಂದರು.

ಶಾಲಾ ಮಕ್ಕಳಿಂದ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆ ಮನರಂಜನಾ ಕಾರ್ಯಕ್ರಮಗಳು ನಡೆದವು. ಅಡವಿಸಿದ್ದೇಶ್ವರ ಮಠದ ಶ್ರೀ ಡಾ.ನಿರುಪಾಧೀಶ್ವರ ಮಹಾಸ್ವಾಮೀಜಿ ಕಾರ್ಯಕ್ರಮ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಸಿಎ ಎಸ್.ಎಂ.ಮಣ್ಣೂರ, ನಿರ್ದೇಶಕರಾದ ದಯಾನಂದ ಪಾಟೀಲ, ರಾಜು ಬೋರ್ಜಿ, ರವಿ ಪಾಟೀಲ, ಆರ್.ಜಿ.ಪಾಟೀಲ, ಕಾರ್ಯದರ್ಶಿ ಶಂಕರಗೌಡ ಪಾಟೀಲ, ಆಡಳಿತಾಕಾರಿ ವಿ.ಎಂ.ಮೇಟಿ, ಜಿ.ಎಸ್.ಪಾಟೀಲ, ಶೋಭಾ ಅರಕೇರಿ ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು.