ಸಾರಾಂಶ
ಮಕ್ಕಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಆಸ್ತಿ ಬೆಳೆಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಎಸ್.ಎಸ್.ಬಿರಾದಾರ ಹೇಳಿದರು.
ಗುಳೇದಗುಡ್ಡ:
ಮಕ್ಕಳು ಪಾಠದ ಜೊತೆಗೆ ಕ್ರೀಡೆಗಳಲ್ಲಿ ಆಸ್ತಿ ಬೆಳೆಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಎಸ್.ಎಸ್.ಬಿರಾದಾರ ಹೇಳಿದರು.ಅವರು ನೀರಲಕೇರಿಯ ಎಂ.ಆರ್.ಗಾಣಿಗೇರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಕ್ರೀಡಾ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಆರೋಗ್ಯಕರವಾದ ದೇಹದಲ್ಲಿ ಆರೋಗ್ಯಕರವಾದ ಮನಸ್ಸು ನಿರ್ಮಾಣವಾಗುತ್ತದೆ. ಕ್ರೀಡೆಗಳು ವ್ಯಕ್ತಿಯನ್ನು ಪರಿಪೂರ್ಣನನ್ನಾಗಿಸುತ್ತದೆ. ದೈಹಿಕ ಸದೃಢತೆಯ ಜೊತೆಗೆ ಅವನಲ್ಲಿ ಮಾನಸಿಕ ಸದೃಢತೆಯನ್ನು ಬೆಳೆಸುತ್ತದೆ. ಇಂದು ಕ್ರೀಡಾ ಜಗತ್ತಿನಲ್ಲಿ ಬದುಕುವ ವ್ಯಕ್ತಿಗಳಿಗೆ ಸರ್ಕಾರದಿಂದ ವಿಶೇಷ ಸವಲತ್ತುಗಳೂ ಇವೆ. ಸರ್ಕಾರದ ಆ ಸವಲತ್ತುಗಳನ್ನು ಪಡೆದುಕೊಂಡು ತಮ್ಮ ಬದುಕನ್ನು ಸುಂದರವಾಗಿ ನಿರ್ಮಿಸಿಕೊಳ್ಳಬೇಕೆಂದರು.
ಸಂಸ್ಥೆಯ ಕಾರ್ಯದರ್ಶಿ ಸಂತೋಷ ಗಾಣಿಗೇರ, ಮುಖ್ಯೋಪಾಧ್ಯಾಯ ಬಸವರಾಜ ಗೌಡರ, ಮುಖ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಆರಂಭದಲ್ಲಿ ವಿದ್ಯಾರ್ಥಿಗಳಿಂದ ಪಥಸಂಚನ ಜರುಗಿತು. ಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.