ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. 22 ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಗಣಪತಿ ಹೋಮ ಹಾಗೂ ಪ್ರಸಾದ ವಿತರಣೆ ನಡೆಯಿತು. ಸೋಮವಾರ ಗಣಪತಿ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಮೆರುಗು ತಂದರು.
ಬೇಲೂರು: 69ನೇ ವರ್ಷದ ಪೇಟೆ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಡೆದ ಅದ್ಧೂರಿ ಮೆರವಣಿಗೆ ಕಿರು ದಸರಾ ವೈಭವದಂತೆ ಸಾರ್ವಜನಿಕರ ಮನಸೂರೆಗೊಂಡಿತು.
ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ 69ನೇ ವರ್ಷದ ಶ್ರೀ ಪ್ರಸನ್ನ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು. 22 ದಿನಗಳ ಕಾಲ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಗಣಪತಿ ಹೋಮ ಹಾಗೂ ಪ್ರಸಾದ ವಿತರಣೆ ನಡೆಯಿತು. ಸೋಮವಾರ ಗಣಪತಿ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮಗಳಿಗೆ ಮೆರುಗು ತಂದರು.ವೀರಗಾಸೆ, ನಾಸಿಕ್ ಡೋಲ್, ಕೇರಳ ಚಂಡೆ ಮದ್ದಲೆ , ರೋಡ್ ಆರ್ಕೆಸ್ಟ್ರಾ, ಗೊಂಬೆ ಮೇಳ, ಮಂಗಳವಾದ್ಯ ಸೇರಿ ವಿವಿಧ ವಾದ್ಯಗೋಷ್ಠಿಯೊಂದಿಗೆ ನಾಗರಿಕರು ತಾಳಕ್ಕೆ ಹೆಜ್ಜೆ ಹಾಕಿ ಕುಣಿದಿದ್ದು ವಿಶೇಷವಾಗಿತ್ತು.
ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಪೈಂಟ್ ರವಿ ಮಾತನಾಡಿ, ಎಲ್ಲಾ ಭಕ್ತಾದಿಗಳ ಸಹಕಾರದಿಂದ 69ನೇ ವರ್ಷದ ಪೇಟೆ ಗಣಪತಿ ಮಹೋತ್ಸವವನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಗಿದೆ. 22 ದಿನಗಳ ಕಾಲ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಇಂದು ಎಲ್ಲರ ಸಹಕಾರದೊಂದಿಗೆ ಪ್ರಮುಖ ಬೀದಿಗಳಲ್ಲಿ ವಿಸರ್ಜನಾ ಮೆರವಣಿಗೆ ನಡೆಸಿ ಶ್ರೀ ಗಣಪತಿಯನ್ನು ವಿಷ್ಣುಸಮುದ್ರದಲ್ಲಿ ವಿಸರ್ಜಿಸಲಾಗುತ್ತಿದೆ. ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಸಮಿತಿಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.ಮೆರವಣಿಗೆ ಬಳಿಕ. ಐತಿಹಾಸಿಕ ವಿಷ್ಣುಸಮುದ್ರದಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯೊಂದಿಗೆ 69ನೇ ವರ್ಷದ ಮಹೋತ್ಸವ ಸಂಪನ್ನಗೊಂಡಿತು.
ಗೌರವಾಧ್ಯಕ್ಷ ಬಿಟ್ರುವಳ್ಳಿ ಉಮೇಶ್, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್ ಎಂ.ವಿ., ಕಾರ್ಯಾಧ್ಯಕ್ಷ ಹೆಬ್ಬಾಳು ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಎಸ್.ಜಿ. ಪ್ರಸನ್ನ, ಖಜಾಂಚಿ ಪರಮೇಶ್ ಸೇರಿ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸಹಕಾರ್ಯದರ್ಶಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಇದ್ದರು.