ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮನವಿ

| Published : Oct 29 2024, 12:48 AM IST

ಸಾರಾಂಶ

ಮೊಳಕಾಲ್ಮುರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಮೊಳಕಾಲ್ಮುರು: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಪರಿಶಿಷ್ಟ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕೆನ್ನುವುದು ಬಹುದಿನದ ಬೇಡಿಕೆಯಾಗಿದೆ. ಕಳೆದ 30 ವರ್ಷಗಳಿಂದ ಹೋರಾಟ ಮಾಡಿದ್ದರೂ ಆಳಿದ ಸರ್ಕಾರಗಳು ಜಾತಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಹಂಚಿಕೆ ಮಾಡದೆ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಲೇ ಬಂದಿವೆ. ಇದರಿಂದ ಮಾದಿಗ ಸಮುದಾಯ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿಯಲು ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಚುನಾವಣೆಗೂ ಮುನ್ನಾ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಒಳ ಮೀಸಲಾತಿ ಜಾರಿ ಮಾಡುವ ಭರವಸೆ ನೀಡಿತ್ತು. ಆದರೆ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆಯುತ್ತಾ ಬಂದರೂ ಇಲ್ಲದ ನೆಪ ಹೇಳುತ್ತಾ ಕಾಲಹರಣ ಮಾಡುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಸರ್ಕಾರ ಕೂಡಲೇ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಕಲ್ಪಿಸಬೇಕು. ಪಲ ಮೀಸಲಾತಿ ಜಾರಿ ಮಾಡುವುದಕ್ಕೂ ಮುನ್ನಾ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಯನ್ನು ತಡೆಹಿಡಿಯಬೇಕು. ಜಾತಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಜಾರಿ ಮಾಡಿ ನುಡಿದಂತೆ ನಡೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ವೇಳೆ ಕ್ಷೇಮಾಭಿವೃದ್ಧಿ ಸಂಘದ ಭಟ್ರಹಳ್ಳಿ ಧನಂಜಯ, ಚಂದ್ರಣ್ಣ, ಬಸವರಾಜ, ನಾಗರಾಜ, ತಿಪ್ಪೇಸ್ವಾಮಿ ಇದ್ದರು.