ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಹಕ್ಕುಪತ್ರ ಜೊತೆಗೆ ಮೂಲ ಸೌಕರ್ಯ ಒದಗಿಸಿಕೊಡುವಂತೆ ತಾಲೂಕಿನ ಚಾಮನಹಳ್ಳಿ ಗ್ರಾಪಂ ವ್ಯಾಪ್ತಿಯ ಜಯಂತಿ ಗ್ರಾಮದ ನಿವಾಸಿಗಳು ಶಾಸಕ ಕೆ.ಎಂ.ಉದಯ್ ಅವರಿಗೆ ಮನವಿ ಸಲ್ಲಿಸಿದರು.ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಶಾಸಕರಿಗೆ ಮನವಿ ಸಲ್ಲಿಸಿದ ಗ್ರಾಮದ ಮುಖಂಡ ರಾಜೇಶ್, 50ಕ್ಕೂ ಹೆಚ್ಚು ವರ್ಷಗಳಿಂದ ಜಯಂತಿ ಗ್ರಾಮದ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಯಾವುದೇ ಸೌಕರ್ಯ ನೀಡದೆ ಜಿಲ್ಲಾ ಮತ್ತು ತಾಲೂಕು ಆಡಳಿತ ವಂಚನೆ ಮಾಡುತ್ತಿದ್ದಾರೆ ಎಂದು ದೂರಿದರು.
ಗ್ರಾಮದ ಸರ್ಕಾರಿ ಜಾಗದಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ, ಬೇರೆ ಯಾವು ಸೌಕರ್ಯ ನೀಡಿಲ್ಲ. ಆಗ ನಿರ್ಮಿಸಿರುವ ಮನೆಗಳು ಸಹ ಶಿಥಿಲಗೊಂಡು ವಾಸಕ್ಕೂ ಸಹ ಯೋಗ್ಯವಾಗಿಲ್ಲ. ಹೀಗಾಗಿ ಹಕ್ಕುಪತ್ರ ನೀಡಿದರೆ ಗ್ರಾಮ ಪಂಚಾಯ್ತಿಯಿಂದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಅನುಕೂಲವಾಗುತ್ತದೆ ಎಂದು ಬೇಡಿಕೆ ಸಲ್ಲಿಸಿದರು.ನಂತರ ನಾಗರಿಕರ ಜೊತೆ ಚರ್ಚಿಸಿದ ಶಾಸಕ ಕೆ.ಎಂ.ಉದಯ್, ಈ ವಿಚಾರವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಶೀಘ್ರದಲ್ಲೇ ತಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಅ.10 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಮಂಡ್ಯ: ನಗರದ ಗಾಂಧಿಭವನದಲ್ಲಿ ಅ.10 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2025 ಮತ್ತು ಹಿರಿಯ ನಾಗರಿಕರ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಅಲಿಂಕೋ ಸಂಸ್ಥೆ ಹಾಗೂ ಜಿಲ್ಲೆಯಲ್ಲಿ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ದುಡಿಯುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಅ.14 ರಿಂದ ಉದರ ದರ್ಶಕ ಶಸ್ತ್ರ ಚಿಕಿತ್ಸೆ
ಮಂಡ್ಯ: ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಕ್ಟೋಬರ್ ಮಾಹೆಯ ಉದರ ದರ್ಶಕ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಬೆಳಗ್ಗೆ 10 ಗಂಟೆಗೆ ಅ.14 ರಂದು ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆ, ಅ.15 ರಂದು ಕೆ.ಆರ್ ಪೇಟೆ ತಾಲೂಕು ಆಸ್ಪತ್ರೆ, ಅ.16 ರಂದು ಮದ್ದೂರು ತಾಲೂಕು ಆಸ್ಪತ್ರೆ, ಅ.17 ರಂದು ಪಾಂಡವಪುರ ಉಪವಿಭಾಗ ಆಸ್ಪತ್ರೆ, ಅ.18 ರಂದು ಮಿಮ್ಸ್ , ಮಂಡ್ಯ ಆಸ್ಪತ್ರೆ, ಅ.28 ರಂದು ನಾಗಮಂಗಲ ಸಾರ್ವಜನಿಕ ಆಸ್ಪತ್ರೆ, ಅ.29 ರಂದು ಮದ್ದೂರು ತಾಲೂಕು ಆಸ್ಪತ್ರೆ, ಅ.30 ರಂದು ಪಾಂಡವಪುರ ಉಪವಿಭಾಗ ಆಸ್ಪತ್ರೆಯಲ್ಲಿ ಮತ್ತು ಪ್ರತಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.