ಸಾರಾಂಶ
ಕನ್ನಡಪ್ರಭ ವಾರ್ತೆ ಮಸ್ಕಿ
ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿರುವುದರಿಂದ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿದೆ ಇದನ್ನು ಖಂಡಿಸಿ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಪಟ್ಟಣದಲ್ಲಿ ಸೋಮವಾರ ಬಿಜೆಪಿ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಹೆಚ್ಚಿನ ಸೀಟುಗಳನ್ನು ಗೆಲ್ಲಿಸಿದ್ದರಿಂದ ಕಾಂಗ್ರೆಸ್ ಸರ್ಕಾರ ಸೋಲಿನಿಂದ ಹತಾಶರಾಗಿ ಇಂಧನ ಬೆಲೆ ಹೆಚ್ಚಿಸಿ ತಮ್ಮ ಸಿಟ್ಟನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಜನರ ಮೇಲೆ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಹೊಟ್ಟೆಯ ಮೇಲೆ ಹೊಡೆಯಲು ಹೊರಟಿದೆ. ಇದಕ್ಕೆ ಜನರು ಉತ್ತರ ನೀಡಲಿದ್ದಾರೆ. ಕೂಡಲೇ ಸರ್ಕಾರ ಇಂಧನ ಬೆಲೆಯನ್ನು ಇಳಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶರಣಬಸವ ಸೋಪ್ಪಿಮಠ, ಬಸವರಾಜಸ್ವಾಮಿ ಹಸಮಕಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ಮೌನೇಶ ನಾಯಕ, ಪಿರಸಭೆ ಸದಸ್ಯರಾದ ಮೌನೇಶ ಮುರಾರಿ, ಮಲ್ಲಯ್ಯ ಅಂಬಾಡಿ, ಮಲ್ಲಣ್ಣ ಬ್ಯಾಳಿ, ಅಭಿಜಿತ ಮಾಲಿಪಾಟೀಲ್ ಗೋವಿಂಪ್ಪ ರಂಗಾಪೂರು, ಸಂತೋಷ ಬಳಿಗಾರ್, ಸೇರಿದಂತೆ ಇತರರು ಇದ್ದರು.