ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರೈತರ ಭುಗಿಲೆದ್ದ ಆಕ್ರೋಶ

| Published : Jun 19 2024, 01:12 AM IST

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರೈತರ ಭುಗಿಲೆದ್ದ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ರೋಲ್, ಡಜೀಲ್, ಬೆಲೆ ಏರಿಕೆ ವಿರುದ್ದ ನಗರದಲ್ಲಿ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಜಾಲಹಳ್ಳಿಹುಂಡಿ ಬಳಿ ರೈತ ಕಾರ್ಯಕರ್ತರ ಪ್ರತಿಭಟನೆ, ರಸ್ತೆತಡೆ, ಸರ್ಕಾರ ವಿರುದ್ಧ ಧಿಕ್ಕಾರದ ಘೋಷಣೆ

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ನಗರದಲ್ಲಿ ರೈತ ಸಂಘದ ಕಾರ್ಯಕರ್ತರು ರಸ್ತೆತಡೆ ಮಾಡಿ ಪ್ರತಿಭಟನೆ ನಡೆಸಿದರು.ರಾಷ್ಟ್ರೀಯ ಹೆದ್ದಾರಿ ಜಾಲಹಳ್ಳಿಹುಂಡಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ಮರಿಯಾಲ ಮಹೇಶ್ ಪುಕ್ಸಟ್ಟೆ ಗ್ಯಾರಂಟಿ ಯೋಜನೆಗಳಿಗಾಗಿ ಜನರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕುತ್ತಿದೆ, ಇಂಧನ ದರ ಏರಿಕೆ ಮಾಡಿ ರೈತರು ಮತ್ತು ಮಧ್ಯಮ ವರ್ಗದವರಿಗೆ ದೊಡ್ಡ ಪೆಟ್ಟು ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.ಪೆಟ್ರೋಲ್ ಬೆಲೆ ಲೀಟರ್‌ಗೆ ೩ ರುಪಾಯಿ ಮತ್ತು ಡೀಸೆಲ್ ಲೀಟರ್‌ಗೆ ೩.೫ ರುಪಾಯಿ ಏರಿಕೆಯಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದ್ದಾರೆ ಎಂದು ಆರೋಪಿಸಿದರು.ಈಗಾಗಲೇ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದಕ್ಕೆ ಹೆಚ್ಚುವರಿಯಾಗಿ ಇಂಧನ ಬೆಲೆಯನ್ನೂ ಏರಿಕೆ ಮಾಡಿ, ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರಕಾರದ ಬೊಕ್ಕಸವನ್ನು ಖಾಲಿ ತೆರಿಗೆ ವಿಧಿಸಿ ಖಜಾನೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ. ತಕ್ಷಣ ಹೆಚ್ಚಿಸಿರುವ ಪೆಟ್ರೋಲ್, ಡೀಸೆಲ್ ಬೆಲೆಯನ್ನು ವಾಪಸು ಪಡೆಯಬೇಕು ಎಂದರು ಆಗ್ರಹಿಸಿದರು.ಪತ್ರಿಭಟನೆಯಲ್ಲಿ ಕೆರೆಹಳ್ಳಿ ಮಹೇಶ್, ಮೂಡ್ನಾಕೂಡು ಮಹೇಶ್, ಹೊನ್ನಹಳ್ಳಿ ಸಿದ್ದರಾಜು, ಕೆಂಪರಾಜು, ಸಿದ್ದಪ್ಪ, ಕಾಳನಹುಂಡಿ ಚಲುವರಾಜು, ಪ್ರಭು ಇತರರು ಭಾಗವಹಿಸಿದ್ದರು.