ಸಾರಾಂಶ
ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.ತಾಲೂಕಿನ ಸುನಗ ತಾಂಡಾದ ನಿವಾಸಿಯಾದ ಸೀಮಾ ರಾಠೋಡ (17) ಬಾಗಲಕೋಟೆಯ ವಾಗ್ದೇವಿ ವಿಜ್ಞಾನ ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದಳು.ವಿದ್ಯಾರ್ಥಿನಿ ನೇಣು ಹಾಕಿಕೊಂಡ ದೃಶ್ಯ ಕಂಡು ಪಿಜಿಯಿಂದ ಹೊರಗೋಡಿ ಬಂದ ವಿದ್ಯಾರ್ಥಿನಿಯರು ಮಾಹಿತಿ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಶವಾಗಾರದ ಮುಂದೆ ಸೀಮಾ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು.ಪಿಜಿ ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬೀಳಗಿ ತಾಲೂಕಿನ ಸುನಗ ತಾಂಡಾದ ನಿವಾಸಿ ಸೀಮಾ ಆಗಿದ್ದು, ಸಾವಿನಲ್ಲಿ ಸಂಶಯವಿದೆ. ಸೂಕ್ತ ತನಿಖೆ ಆಗಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ, ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.