ಸಕ್ತ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಾಗಿ 200 ಕೋಟಿ ಯಷ್ಟು ಅನುದಾನಬಿಡುಗಡೆ ಮಾಡಲಾಗಿದೆ
ಕನ್ನಡಪ್ರಭ ವಾರ್ತೆ ಟಿ. ನರಸೀಪುರ
ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ 200 ಕೋಟಿ ರು. ಗಳ ಅನುದಾನ ಬಿಡುಗಡೆಯಾಗಿದ್ದು ಹಂತ ಹಂತವಾಗಿ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.ಟಿ. ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೆ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಯೋಜನೆಯಡಿ 25 ಲಕ್ಷ ರು. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಪ್ರಸಕ್ತ ಅವಧಿಯಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕೆಲಸಗಳು ಆಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಯತ್ತ ಮುಂದಡಿ ಇಟ್ಟಿರುವುದಾಗಿ ಅವರು ತಿಳಿಸಿದರು.ಪ್ರಸಕ್ತ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಾಗಿ 200 ಕೋಟಿ ಯಷ್ಟು ಅನುದಾನಬಿಡುಗಡೆ ಮಾಡಲಾಗಿದೆ. ಪ. ಜಾತಿ, ಪ. ವರ್ಗ ಹಾಗೂ ಸಾಮಾನ್ಯ ವರ್ಗದ ಜನರು ವಾಸಿಸುವ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ವಿನ ಒತ್ತು ನೀಡಿ ಕಾಮಾಗಾರಿ ಮಾಡಿ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಡಿ. ಬಸವರಾಜು, ಬಗರ್ ಹುಕುಂ ಕಮಿಟಿ ತಾಲೂಕು ಅಧ್ಯಕ್ಷ ಎಚ್.ವಿ. ಶೇಷಾದ್ರಿ, ಡೇರಿ ಕಾರ್ಯದರ್ಶಿ ಹೆಮ್ಮಿಗೆ ಸೋಮಣ್ಣ, ಗ್ರಾಪಂ ಮಾಜಿ ಅಧ್ಯಕ್ಷ ಗುರುಮೂರ್ತಿ, ಮುಖಂಡರಾದ ಚಿಕ್ಕ ಹೊನ್ನಯ್ಯ, ಕರಿಯಪ್ಪ, ಈರಯ್ಯ, ಮಹದೇವ, ವಸಂತ ನಾಯಕ, ಮಲ್ಲಿ ರವಿ, ಬಂಗಾರ ಸ್ವಾಮಿ, ಶಂಕರ, ನಂಜುಂಡಯ್ಯ, ಮಹಾದೇವ, ಬಲ್ಲಯ್ಯ, ಪಿಡಿಒ ಚಿದಾನಂದ, ಮಹೇಶ್, ಬಸವರಾಜು, ತಹಸೀಲ್ದಾರ್ ಸುರೇಶಾಚಾರ್, ಜಿಪಂ ಕಾರ್ಯಪಾಲಕ ಎಂಜಿನಿಯರ್ ಚರಿತ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಚಂದ್ರ, ಅಧಿಕಾರಿಗಳಾದ ಶಿವರಾಜು, ಶಾಂತ, ಕೆ.ಬಿ. ಶ್ವೇತ ಇದ್ದರು.----------------