ಸಾರಾಂಶ
ಮೂಡಲಗಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.
ಮೂಡಲಗಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ. ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪುರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ, ಸುಣಧೋಳಿ ಹಾಗೂ ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ರಸ್ತೆಗಳ ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.