ಶ್ರಮ ಜೀವನಕ್ಕೆ ಹೆಸರಾದ ತಿಗಳ ಸಮುದಾಯದ ಆರಾಧ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿ ದೀಪವಾಗಲಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಪೂರ್ ಹೇಳಿದರು.

ಉಡುಪಿ: ಶ್ರಮ ಜೀವನಕ್ಕೆ ಹೆಸರಾದ ತಿಗಳ ಸಮುದಾಯದ ಆರಾಧ್ಯರಾದ ಶ್ರೀ ಅಗ್ನಿಬನ್ನಿರಾಯರಂತಹ ಮಹಾನ್ ದಾರ್ಶನಿಕರ ಜೀವನಾದರ್ಶಗಳು ಮನುಕುಲದ ಏಳಿಗೆಗೆ ದಾರಿ ದೀಪವಾಗಲಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಪೂರ್ ಹೇಳಿದರು.ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಶ್ರೀ ಅಗ್ನಿ ಬನ್ನಿರಾಯ

ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಗ್ನಿ ಬನ್ನಿರಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಜೀವನದಲ್ಲಿ ಸತ್ಯವನ್ನು ಪ್ರತಿಪಾಧಿಸುತ್ತಿದ್ದ ಅಗ್ನಿಬನ್ನಿರಾಯರ ಮಾರ್ಗವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಶೋಷಣೆ ಮುಕ್ತ ಸಮಾಜಕ್ಕೆ ಶ್ರಮಿಸಿದ ಅಗ್ನಿಬನ್ನಿರಾಯರನ್ನು ಆದರ್ಶವಾಗಿಟ್ಟುಕೊಂಡು ಜೀವನ ರೂಪಿಸಿಕೊಳ್ಳಬೇಕು. ಕೃಷಿ, ಕಲೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದ ತಿಗಳ ಸಮುದಾಯವು ಸಮಾಜದ ಮುನ್ನೆಲೆಗೆ ಬರಬೇಕು ಎಂದರು. ಸಾಂಸ್ಕೃತಿಕ ಚಿಂತಕ ಡಾ. ಶ್ರೀಕಾಂತ್ ಸಿದ್ಧಾಪುರ ಉಪನ್ಯಾಸ ನೀಡಿದರು. ಉಪ ತಹಸೀಲ್ದಾರ್ ನವನೀತ್, ಜಿಲ್ಲಾಡಳಿತದ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ, ಉಪನ್ಯಾಸಕ ರಾಮಾಂಜಿ ವಂದಿಸಿದರು.