ಸಾರಾಂಶ
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಮೂಲ್ಕಿ ವಲಯದ 21ನೇ ವಾರ್ಷಿಕ ಸಭೆ ನಡೆಯಿತು. ದ.ಕ-ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು.
ಕನ್ನಡಪ್ರಭವಾರ್ತೆ ಮೂಲ್ಕಿ
ಗ್ರಾಮೀಣ ಸಂಘಟನೆಯಾಗಿ ಮೂಲ್ಕಿ ವಲಯ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉತ್ತಮ ಸೃಜನ ಲತೆ ಹಾಗೂ ಸಂಘಟನಾತ್ಮಕ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಮಾದರಿಯಾಗಿ ಬೆಳೆದಿದೆ ಎಂದು ದ.ಕ-ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಹೇಳಿದರು.ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಮೂಲ್ಕಿ ವಲಯದ 21ನೇ ವಾರ್ಷಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಛಾಯಾಗ್ರಹಣ ಬಹು ಆಯಾಮಗಳಲ್ಲಿ ಅಭಿವೃದ್ಧಿ ಹೊಂದುತ್ತಿದ್ದು ಛಾಯಾಗ್ರಾಹಕರು ಹೊಂದಿಕೊಂಡು ನಡೆಯಬೇಕಾಗಿದ್ದು ಸಂಸ್ಥೆ ಛಾಯಾಗ್ರಾಹಕರಿಗೆ ತರಬೇತಿ ನೀಡುತ್ತದೆ.ಛಾಯಾ ಸುರಕ್ಷಾ ಆರೋಗ್ಯ ಸಹಕಾರ ಯೋಜನೆ, ಮಕ್ಕಳ ಶೈಕ್ಷಣಿಕ ಸಾಧನೆಗೆ ಗೌರವ ಮುಂತಾದ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದ್ದು ಛಾಯಾಗ್ರಹಕ ಸದಸ್ಯರು ಸಂಸ್ಥೆಗೆ ಸಹಕಾರ ನೀಡಬೇಕೆಂದು ಹೇಳಿದರು.ಈ ಸಂದರ್ಭ ಸಂಸ್ಥೆಯ ಜಿಲ್ಲಾ ಸಂಚಾಲಕ ಕರುಣಾಕರ ಕಾನಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ರಮೇಶ್ ಕಲಾಶ್ರೀ ಮಾತನಾಡಿದರು. ಮುಂದಿನ ಅಧ್ಯಕ್ಷರಾಗಿ ಶ್ರೀನಿವಾಸ್ ಬಪ್ಪನಾಡು ಮತ್ತು ತಂಡವನ್ನು ಆಯ್ಕೆ ಮಾಡಲಾಯಿತು. ಮಹಾಸಭೆಯ ಅಧ್ಯಕ್ಷತೆಯನ್ನು ಮೂಲ್ಕಿ ವಲಯದ ಅಧ್ಯಕ್ಷರಾದ ಪ್ರಕಾಶ್ ಸುವರ್ಣ ವಹಿಸಿದ್ದು ಜಿಲ್ಲಾ ಜೊತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಎಸ್.ಕೆ.ಪಿ ವಿವಿದೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಮೋಹನ್ ರಾವ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ನವೀನಚಂದ್ರ ಅಮೀನ್, ಮೂಲ್ಕಿ ವಲಯದ ಗೌರವಾಧ್ಯಕ್ಷ ಪ್ರಕಾಶ್ ಕೊಡ್ಮಣ್, ಗೌ.ಪ್ರಧಾನ ಕಾರ್ಯದರ್ಶಿ ಯೋಗೀಶ್ ಪಾವಂಜೆ, ಕೋಶಾಧಿಕಾರಿ ನಾಗರಾಜ ಬಪ್ಪನಾಡು ಉಪಸ್ಥಿತರಿದ್ದರು.ಯೋಗೀಶ್ ಪಾವಂಜೆ ಸ್ವಾಗತಿಸಿದರು. ನಾಗರಾಜ್ ಬಪ್ಪನಾಡು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಅರುಣ್ ಉಲ್ಲಂಜೆ ನಿರೂಪಿಸಿದರು.