ಕ್ರೀಡೆಯಿಂದ ದೈಹಿಕ ಆರೋಗ್ಯ ಬೆಳವಣಿಗೆ: ನಂದಕುಮಾರ್

| Published : Oct 09 2025, 02:01 AM IST

ಕ್ರೀಡೆಯಿಂದ ದೈಹಿಕ ಆರೋಗ್ಯ ಬೆಳವಣಿಗೆ: ನಂದಕುಮಾರ್
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಶ್ವಮಾನವ ಕುವೆಂಪು ವಿದ್ಯಾ ಸಂಸ್ಥೆಯ ಬಿಟಿಸಿಜಿ ಪದವಿ ಪೂರ್ವ ಕಾಲೇಜು ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ಶನಿವಾರ ನಡೆಯಿತು. ಕುವೆಂಪು ವಿದ್ಯಾಸಂಸ್ಥೆಯ ನಿರ್ದೇಶಕ ನಂದಕುಮಾರ್ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಬೆಳವಣಿಗೆ ಆಗುತ್ತದೆ. ವಿದ್ಯಾರ್ಥಿಗಳು ಆರೋಗ್ಯವನ್ನು ಕಾಪಾಡಿಕೊಂಡರೆ ಕಲಿಕಾ ಸಾಮರ್ಥ್ಯ ಹೆಚ್ಚುತ್ತದೆ. ಕಬಡ್ಡಿ ಗ್ರಾಮೀಣ ಕ್ರೀಡೆ ಯಾಗಿದೆ ಎಂದರು.ವೇದಿಕೆಯಲ್ಲಿ ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲರಾದ ಮಿಲ್ಡ್ರೆಡ್ ಗೋನ್ಸಾಲ್ವೇಸ್, ಶನಿವಾರಸಂತೆ ಕನ್ನಡ ಭಾರತಿ ಕಾಲೇಜಿನ ಪ್ರಾಂಶುಪಾಲ ಅಶೋಕ್, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಕೆ.ಬಿ. ಸುರೇಶ್ ಇದ್ದರು.