ಸಾರಾಂಶ
ಸೋಲು- ಗೆಲುವು ಮುಖ್ಯವಲ್ಲ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಮುಖ್ಯ.
ಮುಂಡಗೋಡ: ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಿರಲು ಸಾದ್ಯ ಹಾಗಾಗಿ ಮಕ್ಕಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಮಾಜಿ ಶಾಸಕ ವಿ.ಎಸ್ ಪಾಟೀಲ್ ಹೇಳಿದರು.
ಶುಕ್ರವಾರ ತಾಲೂಕಿನ ಕರಗಿನಕೊಪ್ಪ ಮೊರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆ ಇವರ ಆಶ್ರಯದಲ್ಲಿ ಜರುಗಿದ ೨೦೨೫-೨೬ನೇ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿ ಮಾತನಾಡಿದರು.ಸೋಲು- ಗೆಲುವು ಮುಖ್ಯವಲ್ಲ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದು ಅತಿ ಮುಖ್ಯ. ಕೇವಲ ಪಾಠ ಮಾತ್ರವಲ್ಲದೇ ಪಠ್ಯೇತರ ಚಟುವಟಿಕೆಯಲ್ಲಿ ಕೂಡ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದು ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸುಭಾಸ ಡೋರಿ, ರಾಜ್ಯ ಗ್ಯಾರಂಟಿ ತಾಲೂಕಾಧ್ಯಕ್ಷ ರಾಜಶೇಖರ ಹಿರೇಮಠ, ಗಣಪತಿ ಬಾಳಮ್ಮನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರದೀಪ ಕುಲಕರ್ಣಿ ಉಪಸ್ಥಿತರಿದ್ದರು.
ಮುಂಡಗೋಡ ಮಾಜಿ ಶಾಸಕ ವಿ.ಎಸ್ ಪಾಟೀಲ್ ಶುಕ್ರವಾರ ತಾಲೂಕಿನ ಕರಗಿನಕೊಪ್ಪ ಮೊರಾರ್ಜಿ ದೇಸಾಯಿ ಸರ್ಕಾರಿ ವಸತಿ ಶಾಲೆ ಇವರ ಆಶ್ರಯದಲ್ಲಿ ಜರುಗಿದ ೨೦೨೫-೨೬ನೇ ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಕ್ರೀಡಾ ಜ್ಯೋತಿಗೆ ಚಾಲನೆ ನೀಡಿದರು.