ಸಾರಾಂಶ
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವಜಾತ ಶಿಶುವಿನಿಂದ ಹಿಡಿದು ವೃದ್ಧರವರೆಗೆ ಇಂದಿನ ದಿನಗಳಲ್ಲಿ ಪಿಜಿಯೋಥೆರಪಿ ಚಿಕಿತ್ಸೆ ಅವಶ್ಯವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ರೋಗ ತಡೆಗಟ್ಟುವಲ್ಲಿ ಫಿಜಿಯೋಥೆರಪಿ ಚಿಕಿತ್ಸೆಯ ಪ್ರಮುಖವಾಗಿದೆ ಎಂದು ಸಂಜಯ ಗಾಂಧಿ ಟ್ರೌಮಾ ಸಂಸ್ಥೆಯ ಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯರಾದ ಡಾ.ಸಾಯಿಕುಮಾರ ಅಭಿಪ್ರಾಯಪಟ್ಟರು.ನಗರದ ಮೆಡಿಕಲ್ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ನಡೆದ ಬಿವಿವಿ ಸಂಘದ ಫಿಜಿಯೋಥೆರಪಿ ಕಾಲೇಜಿನ ಪ್ರಥಮ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಬದಲಾದ ಜೀವನ ಶೈಲಿಯಿಂದಾಗಿ ಅನೇಕ ಪ್ರಕಾರದ ದೈಹಿಕ ತೊಂದರೆಗಳು ಕಾಣಿಸಿಕೊಳ್ಳುತ್ತಿವೆ. ಫಿಟ್ ಇಂಡಿಯಾ ಪರಿಕಲ್ಪನೆ ಸಾಕಾರಗೊಳ್ಳಲು ಫಿಜಿಯೋಥೆರಪಿ ತಜ್ಞರ ಪಾತ್ರ ಇಂದು ಅನನ್ಯವಾಗಿದ. ಬಾಗಲಕೋಟೆಯಂತಹ ಸಣ್ಣ ನಗರದಲ್ಲಿ ವಿವಿಧ ಪ್ರಕಾರದ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರ ಪ್ರಯತ್ನ ಅಭಿನಂದನಾರ್ಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ ಅಧ್ಯಕ್ಷೀಯ ಭಾಷಣದಲ್ಲಿ ಫಿಜಿಯೋಥೆರಪಿ ಅತ್ಯಂತ ಅಗತ್ಯವಾದ ವೈದ್ಯಕೀಯ ಚಿಕಿತ್ಸೆಯಾಗಿದೆ. ಈ ಭಾಗದಲ್ಲಿ ಫಿಜಿಯೋಥೆರಪಿ ಪರಿಣಿತರ ಕೊರತೆಯನ್ನು ಪರಿಹರಿಸಲು 2019 ರಲ್ಲಿ ಫಿಜಿಯೋಥೆರಪಿ ಕಾಲೇಜನ್ನು ಇಲ್ಲಿ ಆರಂಭಿಸಲಾಯಿತು. ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪನೆಯಾದ ಪ್ರಥಮ ಮತ್ತು ಏಕೈಕ ಫಿಜಿಯೋಥೆರಪಿ ಕಾಲೇಜು ಇದು ಎನ್ನುವ ಹೆಗ್ಗಳಿಕೆ ನಮ್ಮದು ಎಂದು ವಿವರಿಸಿದರು.ಇದೇ ಸಂದರ್ಭದಲ್ಲಿ ಡಾ.ಸಾಯಿಕುಮಾರ ಅವರನ್ನು ಹೃತ್ಪೂರ್ವಕವಾಗಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್.ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ಫಿಜಿಯೋಥೆರಪಿ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಮತ್ತು ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಸೇರಿದಂತೆ ಇತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಅತಿಥಿಗಳನ್ನು ಸ್ವಾಗತಿಸಿದರು. ಅಲ್ಲದೇ, ಫಿಜಿಯೋಥೆರಪಿ ಕಾಲೇಜಿನ ಬೆಳವಣಿಗೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಸುಚಿತ್ರಾ ದಿವಾನಮಲ್ ಪದವಿಧರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಡಾ.ಭವಾನಿ ಬಳ್ಳೂರ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು ಮತ್ತು ಡಾ.ಮಹಾಂತೇಶ ಬಿರಡಿ ವಂದಿಸಿದರು. ನೇಹಾ ಮತ್ತು ನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು.ಈ ಸಮಾರಂಭದಲ್ಲಿ ಬಿ.ವಿ.ವಿ.ಸಂಘದ ಗೌರವಾನ್ವಿತ ಸದಸ್ಯರು, ಆಡಳಿತಾಧಿಕಾರಿಗಳು, ಗಣ್ಯರು, ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಫಿಜಿಯೋಥೆರಪಿ ಕಾಲೇಜು ಮತ್ತು ಎಸ್.ಎನ್.ಮೆಡಿಕಲ್ ಕಾಲೇಜಿನ ವೈದ್ಯರು, ವಿದ್ಯಾರ್ಥಿಗಳು ಮತ್ತು ಪಾಲಕರು ಪಾಲ್ಗೊಂಡಿದ್ದರು.----------------------------------------------
ಕೋಟ್ಇನ್ನು ಕೆಲವೇ ದಿನಗಳಲ್ಲಿ ಕಾಲೇಜು ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಗತ್ಯವಾದ ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿದೆ. ಬಿ.ಪಿ.ಟಿ ಪ್ರವೇಶ ದಾಖಲಾತಿ ಸಂಖ್ಯೆ ಹೆಚ್ಚಿಸಲು ಮತ್ತು ಎಂ.ಪಿ.ಟಿ ಕೋರ್ಸ್‌ನ್ನು ಆರಂಭಕ್ಕೆ ಪರಿವೀಕ್ಷಣೆಗಾಗಿ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಶೀಘ್ರವೇ ಯೋಗ ಮತ್ತು ನ್ಯಾಚುರೋಪತಿ ಕಾಲೇಜು ಸ್ಥಾಪಿಸಲಾಗುವುದು.
- ಡಾ.ವೀರಣ್ಣ ಚರಂತಿಮಠ, ಬಿವಿವಿ ಸಂಘದ ಕಾರ್ಯಾಧ್ಯಕ್ಷ-------------
;Resize=(128,128))
;Resize=(128,128))
;Resize=(128,128))
;Resize=(128,128))