ಪ್ರಿಯಾಂಕ್‌ ಖರ್ಗೆ ಡಿಸಿಎಂ ಮಾಡಲು ದೆಹಲಿಯಲ್ಲಿ ಪ್ಲ್ಯಾನ್‌: ಬಿ. ಶ್ರೀರಾಮುಲು

| Published : Oct 24 2025, 01:00 AM IST

ಪ್ರಿಯಾಂಕ್‌ ಖರ್ಗೆ ಡಿಸಿಎಂ ಮಾಡಲು ದೆಹಲಿಯಲ್ಲಿ ಪ್ಲ್ಯಾನ್‌: ಬಿ. ಶ್ರೀರಾಮುಲು
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಆರ್‌ಎಸ್‌ಎಸ್ ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮಕೈಗೊಳ್ಳುವ ಕೆಲಸ ಮಾಡುತ್ತಿದೆ.

ಹುಬ್ಬಳ್ಳಿ:

ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಉಪಮುಖ್ಯಮಂತ್ರಿ ಆಗುತ್ತಾರೆ. ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ. ಈ ಕುರಿತಂತೆ ದೆಹಲಿಯಲ್ಲಿ ಪ್ಲ್ಯಾನ್‌ ಆಗಿದೆ ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದರು.

ಒಂದು ವೇಳೆ ವಾಲ್ಮೀಕಿ ಸಮುದಾಯದ ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ನಮ್ಮ ಬೆಂಬಲವಿದೆ ಎಂದು ಇದೇ ವೇಳೆ ಅವರು ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆ ಉಪಮುಖ್ಯಮಂತ್ರಿ ಮಾಡುವ ಹಿನ್ನೆಲೆಯಲ್ಲಿ ರಾಜ್ಯದ ಜನರ ಗಮನವನ್ನು ಬೇರೆಡೆ ಸೆಳೆಯುವ ನಿಟ್ಟಿನಲ್ಲಿ ಆರ್‌ಎಸ್‌ಎಸ್ ಹಾಗೂ ಅದನ್ನು ಬೆಂಬಲಿಸುವವರ ಮೇಲೆ ಕಾಂಗ್ರೆಸ್ ಸರ್ಕಾರ ವಿನಾಕಾರಣ ಕ್ರಮಕೈಗೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ನವೆಂಬರ್‌ನಲ್ಲಿ ಕ್ರಾಂತಿಯಾಗುತ್ತದೆ ಎಂದಿದ್ದ ಮಾಜಿ ಸಚಿವ ರಾಜಣ್ಣ ಅವರಿಂದ ಕಾಂಗ್ರೆಸ್‌ ನಾಯಕರು ರಾಜೀನಾಮೆ ಪಡೆದರು. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಆದ ಒಪ್ಪಂದದಂತೆ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯರಿದ್ದಾರೆ. ಖರ್ಗೆ ಪುತ್ರ ಪ್ರಿಯಾಂಕ್‌ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಮಾತುಕತೆ ಆಗಿದೆ ಎಂದರು.ಜಾರಕಿಹೊ‍ಳಿ ಸಿಎಂ ಆದರೆ ಸ್ವಾಗತವಾಲ್ಮೀಕಿ ಸಮುದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ. ಪಕ್ಷದಲ್ಲಿ ಅವರು ದುಡಿದಿದ್ದಾರೆ. ಅವಕಾಶ ಸಿಕ್ಕಲ್ಲಿ ಸಿಎಂ ಆದರೆ ನಮಗೆ ಸಂತೋಷವಿದೆ ಎಂದು ರಾಮುಲು ಹೇಳಿದರು.

ರಾಜ್ಯದಲ್ಲಿ ವಿಧಾನ ಪರಿಷತ್ ಸದಸ್ಯರ ಅವಧಿ ಮುಗಿದಿದ್ದು, ಐದು ಸದಸ್ಯರ ನೇಮಕಾತಿ ನಡೆಯಬೇಕಿದೆ. ಈ ಕುರಿತಂತೆ ಬಿಜೆಪಿ ನಾಯಕರ ಸಭೆ ನಡೆಸಲಾಗುತ್ತಿದೆ. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಸಭೆ ನಡೆಸಿ ವರದಿಯನ್ನು ರಾಜಾಧ್ಯಕ್ಷರು ಹಾಗೂ ಕೇಂದ್ರದ ನಾಯಕರಿಗೆ ಸಲ್ಲಿಸಲಾಗುವುದು. ಅವರು ಅಂತಿಮ ಪಟ್ಟಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಿದರು.