ಕದ್ರಿಯಲ್ಲಿ 3 ದಿನಗಳ ಸಸ್ಯೋತ್ಸವ, ರೈತ ಮೇಳಕ್ಕೆ ಚಾಲನೆ

| Published : Oct 18 2025, 02:02 AM IST

ಕದ್ರಿಯಲ್ಲಿ 3 ದಿನಗಳ ಸಸ್ಯೋತ್ಸವ, ರೈತ ಮೇಳಕ್ಕೆ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಕದ್ರಿ ಉದ್ಯಾನವನದಲ್ಲಿ ಅ.17ರಿಂದ ಮೂರು ದಿನಗಳವರೆಗೆ ಆಯೋಜಿಸಿದ ‘ಕದ್ರಿ ಸಸ್ಯೋತ್ಸವ -ರೈತ ಮೇಳ’ಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಉದ್ಘಾಟಿಸಿದರು.

ಮಂಗಳೂರು: ರೈತ ಕುಡ್ಲ ಪ್ರತಿಷ್ಠಾನ ಮಂಗಳೂರು ನೇತೃತ್ವದಲ್ಲಿ ಗ್ಲೋಬಲ್‌ ಇಕೋ ಗ್ರೀನ್‌ ಫೌಂಡೇಶನ್‌ ಸಹಕಾರದಲ್ಲಿ ಕದ್ರಿ ಉದ್ಯಾನವನದಲ್ಲಿ ಅ.17ರಿಂದ ಮೂರು ದಿನಗಳವರೆಗೆ ಆಯೋಜಿಸಿದ ‘ಕದ್ರಿ ಸಸ್ಯೋತ್ಸವ -ರೈತ ಮೇಳ’ಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ದ.ಕ. ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಉದ್ಘಾಟಿಸಿ ಮಾತನಾಡಿ, ಈ ರೀತಿಯ ಸಸ್ಯೋತ್ಸವ -ರೈತ ಮೇಳಗಳು ಇನ್ನಷ್ಟು ನಡೆಯಬೇಕು. ಆ ಮೂಲಕ ಸ್ವಾವಲಂಬಿ ಜೀವನ ಸಾಗಿಸಲು ಮಾದರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭ ಮಾಣಿಲ ಮುರುವ ನಿವಾಸಿ, ಬೇಸಾಯ ಹಾಗೂ ಮನೆಯ ಖರ್ಚಿಗಾಗಿ ನೀರಿನ ಸಮಸ್ಯೆ ಎದುರಾದಾಗ ಸುರಂಗಗಳನ್ನು ಕೊರೆದು‌‌ ಜಲ ಸಂಗ್ರಹಿಸಿದ ಸಾಧಕ ಜಾನ್ ಮೊಂತೇರೊ ಅವರಿಗೆ ರೈತ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ದ.ಕ.ಜಿ.ಪಂ. ಸಿಇಒ ನರ್ವಡೆ ವಿನಾಯಕ ಕಾರ್ಭಾರಿ, ತೋಟಗಾರಿಕಾ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಅರಣ್ಯ ಇಲಾಖೆಯ ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್‌, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಕಾರ್ಯಕಾರಿ ಸದಸ್ಯರಾದ ಜಗನ್ನಾಥ ಗಾಂಭೀರ್, ಜಿ.ಕೆ. ಭಟ್, ರಾಮ ಮೊಗರೋಡಿ, ಉದ್ಯಮಿ ಜಗನ್ನಾಥ ಗಾಂಭೀರ್ ಮತ್ತಿತರರು ಇದ್ದರು. ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷ ಭರತ್ ರಾಜ್ ಸೊರಕೆ ಸ್ವಾಗತಿಸಿ, ಪ್ರಾಸ್ತಾವಿಸಿದರು.ಸಸ್ಯೋತ್ಸವ, ರೈತ ಮೇಳದಲ್ಲೇನೇನು?ಕದ್ರಿ ಉದ್ಯಾನವನದಲ್ಲಿ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೂರು ದಿನಗಳ ಕಾಲ ಸಸ್ಯೋತ್ಸವ -ರೈತ ಮೇಳ ನಡೆಯಲಿದೆ. ಕಸಿ ಕಟ್ಟುವ ಬಗ್ಗೆ ಉಚಿತ ತರಬೇತಿ ಇದ್ದು ಇದರ ಲಾಭವನ್ನು ಪಡೆಯಲು ಅವಕಾಶವಿದೆ. ನಗರ ಜೇನು‌ಕೃಷಿಗೆ ಪೂರಕವಾಗಿ ಜೇನುಕೃಷಿ ಮಾಹಿತಿ, ಸ್ಥಳೀಯ ರೈತೋದ್ಯಮಿಗಳು ತಯಾರಿಸಿದ ಉತ್ಪನ್ನಗಳ ಮಾರಾಟ, ಖಾದಿ ಉತ್ಪನ್ನಗಳ ಮಾರಾಟ ಆಯೋಜಿಸಲಾಗಿದೆ. ದೀಪಾವಳಿ ‌ಹಬ್ಬಕ್ಕೆ ಅಗತ್ಯವಾದ ಮಣ್ಣಿನ ಹಣತೆ, ಗೂಡುದೀಪ, ಅಲಂಕಾರಿಕ ವಸ್ತುಗಳು ಮಾರಾಟಕ್ಕೆ ಇಡಲಾಗಿದೆ.