ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಎಲ್ಲರದಾಗಲಿ: ಎ.ವಿ.ಸುಬ್ರಹ್ಮಣ್ಯ

| Published : Jun 06 2024, 12:31 AM IST

ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಎಲ್ಲರದಾಗಲಿ: ಎ.ವಿ.ಸುಬ್ರಹ್ಮಣ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಒಂದು ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಮೂಡಬೇಕಿದೆ ಎಂದು ವಲಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು.

ನಗರದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ಅರಣ್ಯ ಇಲಾಖೆ, ಜಿಲ್ಲಾ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರ, ಎನ್ಎಸ್ಎಸ್ ಘಟಕ, ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪರಿಸರ ಮತ್ತು ನೀರಿನ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಯುವ ಸಮೂಹ ಪರಿಸರ ಕಾಪಾಡಿಕೊಳ್ಳಬೇಕಿದೆ. ಆಧುನಿಕತೆ ವ್ಯಾಮೋಹ ಎಂದಿಗೂ ನಮ್ಮ ಪರಿಸರ ಹಾಳು ಮಾಡದಿರಲಿ ಎಂದು ಹೇಳಿದರು.

ಅರಣ್ಯ ವಲಯ ಸಂರಕ್ಷಣಾಧಿಕಾರಿ ಸುಧಾಕರ್ ಮಾತನಾಡಿ, ಮರ ಗಿಡಗಳಿಲ್ಲದೆ ಭೂಮಿ ಮರುಭೂಮಿಯಾಗುತ್ತಿದೆ. ಹವಾಮಾನ ವೈಪರಿತ್ಯ ಜಗತ್ತನ್ನು ತಲ್ಲಣಗೊಳಿಸುತ್ತಿದೆ ಎಂದರು.

ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಡಾ.ಎಚ್.ಬಿ.ಸುರೇಶ್ ಮಾತನಾಡಿ, ಜಿಲ್ಲಾ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿತ ಕೇಂದ್ರವು ಕಳೆದ 15 ವರ್ಷದಿಂದ ಪರಿಸರ ಸಂರಕ್ಷಣೆಯಲ್ಲಿ ಹಲವು ಕಾರ್ಯಕ್ರಮ ಆಯೋಜಿಸಿ ರೈತರಿಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರ ಸಂರಕ್ಷಣೆಯಲ್ಲಿ ಅರಿವು ಮೂಡಿಸುತ್ತಿದೆ. 20,000 ಲೀಟರ್ ಜೈವಿಕ ಇಂಧನ ಉತ್ಪಾದನೆ ಮಾಡಿ ಮಾರಾಟ ಮಾಡುತ್ತಾ ಬಂದಿದೆ‌ ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ, ಜಿಲ್ಲಾ ಜೈವಿಕ ಇಂಧನ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕೇಂದ್ರದ ಸಂಚಾಲಕ ಡಾ.ಎಸ್.ಜಿ.ಚೇತನ್, ಪ್ರಾತ್ಯಕ್ಷಿಕೆ ಕೇಂದ್ರದ ಡಾ.ರವಿಕುಮಾರ್, ರೆಡ್ ಕ್ರಾಸ್ ಘಟಕ ಸಂಚಾಲಕ ಅರುಣ್ ಕುಮಾರ್ ಮತ್ತು ಎನ್ಎಸ್ಎಸ್ ಘಟಕ ಸಂಚಾಲಕರಾದ ಆನಂದ್ ರಾಜ್ ಉಪಸ್ಥಿತರಿದ್ದರು.