ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ವಿಜಯಪುರ ಮತ್ತು ವಿವಿಧ ಇಲಾಖೆಯ ಸಹಯೋಗದೊಂದಿಗೆ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಮದಾಪುರದಲ್ಲಿ ಪ್ರಜಾಪ್ರಭುತ್ವ ದಿನದ ನಿಮಿತ್ಯ 6 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಅರಣ್ಯ ಇಲಾಖೆಯ ಅಧಿಕಾರಿಗಳು, ತಾಲೂಕಾ ಪಂಚಾಯತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿ ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ನರೇಗಾ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಇತರರರು ಹಾಜರಿದ್ದರು.