ಮ.ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ತಪಾಸಣೆ

| Published : Feb 13 2025, 12:46 AM IST

ಮ.ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ತಪಾಸಣೆ
Share this Article
  • FB
  • TW
  • Linkdin
  • Email

ಸಾರಾಂಶ

ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟ ಹಾಗೂ ತಾಳುಬೆಟ್ಟದಲ್ಲಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ನೀರಿನ ಬಾಟಲ್ ಹಾಗೂ ಪ್ಲಾಸ್ಟಿಕ್ ಅನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳು ವಶಕ್ಕೆ ಪಡೆದರು.

ಕನ್ನಡಪ್ರಭ ವಾರ್ತೆ ಹನೂರು ಮಲೆಮಾದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧಗೊಳಿಸಿರುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ವಾಟರ್ ಬಾಟಲ್, ಪ್ಲಾಸ್ಟಿಕ್ ಕವರ್‌ಗಳನ್ನು ಬುಧವಾರ ವಶಕ್ಕೆ ಪಡೆಯಲಾಯಿತು.

ತಾಲೂಕಿನ ಶ್ರೀಕ್ಷೇತ್ರ ಪುಣ್ಯಕ್ಷೇತ್ರ ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಫೆ.9ರಂದು ತಾಳು ಬೆಟ್ಟದಲ್ಲಿ ಪ್ಲಾಸ್ಟಿಕ್ ಪರಿಶೀಲನೆ ತನಿಖೆ ಠಾಣೆ ತೆರೆಯುವ ಮೂಲಕ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಇ ರಘು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಮಾರಾಟ ಹಾಗೂ ಪ್ಲಾಸ್ಟಿಕ್ ಬಳಕೆ ಮಾಡದಂತೆ ಎಚ್ಚರಿಕೆ ನೀಡುವ ಮೂಲಕ ಮಲೆಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು ತಪಾಸಣೆ ಮಾಡುವ ಮೂಲಕ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಿದರು.

ಏಕಕಾಲದಲ್ಲಿ ದಾಳಿ:

ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಇ ರಘು ಹಾಗೂ ಉಪ ಕಾರ್ಯದರ್ಶಿ ಚಂದ್ರಶೇಖರ್ ಸೇರಿದಂತೆ ಅಧಿಕಾರಿಗಳ ತಂಡ ಮಲೆಯ ಮಾದೇಶ್ವರ ಬೆಟ್ಟದಲ್ಲಿ ಎರಡು ತಂಡ ಹಾಗೂ ತಾಳು ಬೆಟ್ಟದಲ್ಲಿ ಒಂದು ತಂಡ ದಾಳಿ ನಡೆಸಿ ನಿಷೇಧದ ನಡುವೆಯೂ ಮಾರಾಟ ಮಾಡುತ್ತಿದ್ದ ನೀರಿನ ಪ್ಲಾಸ್ಟಿಕ್ ಬಾಟಲ್ ಸೇರಿದಂತೆ ಕವರ್ ಹಾಗೂ ನೋಟಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟುಗಳ ಮೇಲೆ ದಾಳಿ ನಡೆಸಿ ವಶಕೆ ಪಡೆದು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ಫೆ.9ರಂದು ಪ್ಲಾಸ್ಟಿಕ್ ನಿಷೇಧಗೊಳಿಸುವ ಮೂಲಕ ಶ್ರೀ ಕ್ಷೇತ್ರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎಇ ರಘು ಅವರ ದಿಟ್ಟ ನಿರ್ಧಾರದಿಂದ ಸಂಪೂರ್ಣ ಪ್ಲಾಸ್ಟಿಕ್ ನಿಷೇಧಗೊಳಿಸುವ ಮೂಲಕ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕ್ರಮ ಕೈಗೊಂಡಿದ್ದಾರೆ. ತಾಳುಬೆಟ್ಟದಲ್ಲೂ ತನಿಖೆ ಠಾಣೆ ತೆರೆದು ಬರುವಂತಹ ವಾಹನಗಳನ್ನು ಪರಿಶೀಲಿಸಿ ಪ್ಲಾಸ್ಟಿಕ್ ಬಾಟಲ್ ಮತ್ತು ಕವರ್‌ಗಳು ಪರಿಸರಕ್ಕೆ ಮಾರಕ. ಜೊತೆಗೆ ಶ್ರೀ ಕ್ಷೇತ್ರಕ್ಕೆ ಬರುವ ಪಾದಯಾತ್ರೆಗಳು ಕಾಡು ಪ್ರಾಣಿಗಳ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕ್ರಮದೊಂದಿಗೆ ಶ್ರೀ ಕ್ಷೇತ್ರದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಗೊಳಿಸಿರುವ ಹಿನ್ನೆಲೆಯಲ್ಲಿ ವಿವಿಧಡೆ ದಾಳಿ ನಡೆಸಿ ಅಪಾರ ಸಂಖ್ಯೆಯ ಪ್ಲಾಸ್ಟಿಕ್ ನೀರಿನ ಬಾಟಲ್ ಸೇರಿದಂತೆ ಇನ್ನಿತರ ಪ್ಲಾಸ್ಟಿಕ್ ಕವರ್ ಗಳನ್ನು ಸಹ ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದಾರೆ.ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಹಿನ್ನೆಲೆ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಹೀಗಾಗಿ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು ಪ್ಲಾಸ್ಟಿಕ್ ಮುಕ್ತಗೊಳಿಸಲು ಭಕ್ತರು, ವ್ಯಾಪಾರ ಮಾಡುತ್ತಿರುವ ಪ್ರತಿಯೊಬ್ಬರೂ ಸಹಕಾರ ನೀಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಶ್ರೀ ಕ್ಷೇತ್ರವನ್ನಾಗಿ ಪರಿವರ್ತಿಸಲು ಸಹಕಾರ ನೀಡಬೇಕು. -ಎಇ ರಘು, ಕಾರ್ಯದರ್ಶಿ, ಮಲೆಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ