ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ

| N/A | Published : Nov 01 2025, 04:15 AM IST

Plastic ban
ಸರ್ಕಾರಿ ಸಭೆಗಳಲ್ಲಿ ಪ್ಲಾಸ್ಟಿಕ್‌ ನೀರಿನ ಬಾಟಲಿಗೆ ನಿಷೇಧ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯಾದ್ಯಂತ ಸರ್ಕಾರಿ ಸಭೆ, ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಬದಲಿಗೆ ಪರಿಸರ ಸ್ನೇಹಿ ಪರಿಕರಗಳನ್ನು ಬಳಸಬೇಕು. ಜತೆಗೆ ಎಲ್ಲ ಸಭೆ, ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ನಂದಿನಿ ತಿನಿಸುಗಳನ್ನು ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

  ಬೆಂಗಳೂರು :  ರಾಜ್ಯಾದ್ಯಂತ ಸರ್ಕಾರಿ ಸಭೆ, ಕಾರ್ಯಕ್ರಮಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಬದಲಿಗೆ ಪರಿಸರ ಸ್ನೇಹಿ ಪರಿಕರಗಳನ್ನು ಬಳಸಬೇಕು. ಜತೆಗೆ ಎಲ್ಲ ಸಭೆ, ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ನಂದಿನಿ ತಿನಿಸುಗಳನ್ನು ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ

ಈ ಕುರಿತು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಟಿಪ್ಪಣಿ ಕಳುಹಿಸಿರುವ ಅವರು, ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರ ಬಳಸುವಂತೆ ಸೂಚಿಸಲಾಗಿತ್ತು. ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ಕೆಎಂಎಫ್‌ ನಂದಿನಿ ತಿನಿಸು ಕಡ್ಡಾಯ

ಮುಖ್ಯಮಂತ್ರಿ, ಇಲಾಖಾ ಸಚಿವರ ಕಚೇರಿ, ಸಚಿವಾಲಯ ಸೇರಿ ರಾಜ್ಯಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಸಭೆ, ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್‌ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲ ಇಲಾಖಾ ಮುಖ್ಯಸ್ಥರಿಗೆ ಅಗತ್ಯ ಸೂಚನೆ ನೀಡಿ ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

Read more Articles on