ಸುಖಮಯ ಬದುಕಿಗೆ ವೈದ್ಯರ ಪಾತ್ರ ಹಿರಿದು: ಶ್ರೀ ವಿದ್ಯಾಪ್ರಸನ್ನ ತೀರ್ಥ

| Published : May 07 2025, 12:52 AM IST

ಸಾರಾಂಶ

ಆತ್ರಾಡಿ ಸಮೀಪದ ಮದಗದಲ್ಲಿ ಗಾಂಧಿ ಆಸ್ಪತ್ರೆ 30ನೇ ವಾರ್ಷಿಕೋತ್ಸವ ಹಾಗೂ ಪಂಚಮಿ ಟ್ರಸ್ಟ್ ರಜತ ಸಂಭ್ರಮಾಚಾರಣೆ ನಡೆಯಿತು. ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮಾನಸಿಕ ಮತ್ತು ದೈಹಿಕ ಅಸ್ವಸ್ತ್ಯ ಅತಿಶಯ ದುರಾಸೆ ಫಲ. ಜನರು ಪಡೆದುಕೊಳ್ಳುವ ಭರದಲ್ಲಿ ಶಾಂತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಜನ್ಮಾನಂತರ ಕರ್ಮ ಫಲವಾಗಿ ಬದುಕಿನಲ್ಲಿ ಕಷ್ಟಸುಖ ಪ್ರಾಪ್ತಿಯಾಗುತ್ತವೆ. ಅದೆಲ್ಲವನ್ನು ದಾಟಿ ಸುಖಮಯ ಬದುಕಿಗೆ ವೈದ್ಯರ ಮತ್ತು ಆಸ್ಪತ್ರೆಯ ಪಾತ್ರ ಮಹತ್ವದ್ದಾಗಿದೆ ಎಂದು ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥರು ಹೇಳಿದರು.

ಅವರು ಇಲ್ಲಿನ ಆತ್ರಾಡಿ ಸಮೀಪದ ಮದಗದಲ್ಲಿ ಗಾಂಧಿ ಆಸ್ಪತ್ರೆ 30ನೇ ವಾರ್ಷಿಕೋತ್ಸವ ಹಾಗೂ ಪಂಚಮಿ ಟ್ರಸ್ಟ್ ರಜತ ಸಂಭ್ರಮಾಚಾರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಪಂಚದಲ್ಲಿ ಮನುಷ್ಯನನ್ನು ಹೊರತುಪಡಿಸಿ ಯಾವುದೇ ಜೀವರಾಶಿಗಳು ಪ್ರಕೃತಿಗೆ ವಿರುದ್ಧವಾಗಿಲ್ಲ. ಹೀಗಾಗಿ ಮನುಷ್ಯ ಪ್ರಕೃತಿಗೆ ಪೂರಕವಾಗಿಲ್ಲದ ಕಾರಣ ಅನಾರೋಗ್ಯಗಳು ಬಾಧಿಸುತ್ತಿವೆ ಎಂದವರು ಹೇಳಿದರು.

ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರೀಶ್ಚಂದ್ರ ಪ್ರಾಸ್ತವಿಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಜ್ಯೋತಿಷ್ವಿದ್ವಾನ್ ಕಬಿಯಾಡಿ ಜಯರಾಮ ಆಚಾರ್ಯ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಖ್ಯಾತ ಮನೋವೈದ್ಯ ಡಾ. ಪಿ.ವಿ. ಭಂಡಾರಿ, ಉದ್ಯಮಿ ಎನ್. ಅಚ್ಚುತ ಹೊಳ್ಳ, ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ, ಲಕ್ಷ್ಮೀ ಹರಿಶ್ಚಂದ್ರ, ಡಾ. ಪಂಚಮಿ, ಡಾ. ವಿದ್ಯಾತಂತ್ರಿ ಉಪಸ್ಥಿತರಿದ್ದರು. ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು.ನಂತರ ಖ್ಯಾತ ಕೊಳಲು ಗುರು ಬನ್ನಂಜೆ ರಾಘವೇಂದ್ರ ರಾವ್ ಮತ್ತು ರವಿ ಕುಳೂರ್ ಶಿಷ್ಯರಾದ ಬಾಲ ಕಲಾವಿದರಿಂದ ಕೊಳಲು ವಾದನ ಮತ್ತು ಹೆಸರಾಂತ ವಯೋಲಿನ್ ವಾದಕಿ ಗುರುವಾಯುರಿನ ಗಂಗಾ ಶಶಿಧರನ್ ಅವರ ಕಛೇರಿ ನಡೆಯಿತು.