ಸೆ.13ರ ಲೋಕ ಅದಾಲತ್ ಯಶಸ್ವಿಗೆ ಸಹಕಾರ ನೀಡಿ

| Published : Aug 21 2025, 01:00 AM IST

ಸಾರಾಂಶ

ನಾಗಮಂಗಲ ಪಟ್ಟಣದ ನಾಲ್ಕೂ ನ್ಯಾಯಾಲಯಗಳಲ್ಲಿ ಈವರೆಗೆ ಒಟ್ಟು 8396 ಪ್ರಕರಣಗಳು ಬಾಕಿ ಇವೆ. ಈ ಪೈಕಿ 663 ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ನೇಮಕ ಮಾಡಿಕೊಳ್ಳಲಾಗಿದೆ. ಮತ್ತಷ್ಟು ಪ್ರಕರಣಗಳು ಸೇರ್ಪಡೆಯಾಗಲಿವೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ಪಟ್ಟಣದಲ್ಲಿ ಸೆ.13 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಯಶಸ್ಸಿಗೊಳಿಸಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪೂರ್ಣ ಸಹಕಾರ ನೀಡಬೇಕು ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಫೇಲಿಕ್ಸ್ ಅಲ್ಫೋನ್ಸ್ ಅಂಥೋನಿ ಸೂಚಿಸಿದರು.

ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ಲೋಕ ಅದಾಲತ್ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಪಟ್ಟಣದ ನಾಲ್ಕೂ ನ್ಯಾಯಾಲಯಗಳಲ್ಲಿ ಈವರೆಗೆ ಒಟ್ಟು 8396 ಪ್ರಕರಣಗಳು ಬಾಕಿ ಇವೆ. ಈ ಪೈಕಿ 663 ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲು ನೇಮಕ ಮಾಡಿಕೊಳ್ಳಲಾಗಿದೆ. ಮತ್ತಷ್ಟು ಪ್ರಕರಣಗಳು ಸೇರ್ಪಡೆಯಾಗಲಿವೆ ಎಂದರು.

ಈ ಬಾರಿಯ ಲೋಕಾ ಅದಾಲತ್ ನಲ್ಲಿ ವಿಚಾರಣೆಗೆ ಬಾಕಿ ಉಳಿದಿರುವ ವ್ಯವಹಾರಿಕ ಸಾಧನ, ಅಪಘಾತ, ಚೆಕ್‌ಬೌನ್ಸ್ ಹಾಗೂ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳೂ ಸೇರಿದಂತೆ 500ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಬೇಕೆಂಬ ಗುರಿ ಹೊಂದಲಾಗಿದೆ ಎಂದರು.

ಸಿವಿಲ್ ಪ್ರಕರಣಗಳು ಕಡಿಮೆ ಇವೆ. ಆದರೆ, ಚೆಕ್‌ಬೌನ್ಸ್ ಸೇರಿದಂತೆ ಕ್ರಿಮಿನಲ್ ಪ್ರಕರಣಗಳೇ ಹೆಚ್ಚಾಗಿವೆ. ಚೆಕ್ ಕೊಟ್ಟು ಹಣ ತೆಗೆದುಕೊಂಡು ಪ್ರಕರಣ ಬಾಕಿ ಉಳಿಸಿಕೊಂಡಿರುವವರು ದಯಮಾಡಿ ನ್ಯಾಯಾಲಯಕ್ಕೆ ಅಪ್ರೋಚ್ ಮಾಡಿ ನಿಮ್ಮ ವ್ಯಾಜ್ಯಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದರು.

ಎರಡೂ ಕಡೆಯ ಕಕ್ಷಿದಾರರು ಪರಸ್ಪರ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಯಾರಿಗೂ ಸೋಲಾಗದೆ ಇಬ್ಬರಿಗೂ ಜಯಸಿಕ್ಕಂತಾಗುತ್ತದೆ. ಈ ಕುರಿತು ಅಧಿಕಾರಿಗಳು ಮತ್ತು ವಕೀಲಕರು ಕಕ್ಷಿದಾರರ ಮನವೋಲಿಸಬೇಕು ಎಂದರು.

ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ನರಸಿಂಹಮೂರ್ತಿ,ಸಿವಿಲ್ ನ್ಯಾಯಾಧೀಶ ಎಚ್.ಎಸ್.ಶಿವರಾಜು, ಅಪರ ಸಿವಿಲ್ ನ್ಯಾಯಾಧೀಶ ಕೆ.ಪಿ.ಸಿದ್ದಪ್ಪಾಜಿ, ಸಹಾಯಕ ಸರ್ಕಾರಿ ಅಭಿಯೋಜಕಿ ಅರುಣಾಬಾಯಿ, ವಕೀಲರ ಸಂಘದ ಅಧ್ಯಕ್ಷ ಮಹದೇವ, ಗ್ರೇಡ್-2 ತಹಸೀಲ್ದಾರ್ ಮಂಜುನಾಥ್, ತಾಪಂ ಇಒ ಸತೀಶ್, ಸಿಪಿಐ ನಿರಂಜನ್, ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶಿವಕುಮಾರ್, ಬೆಳ್ಳೂರು ಠಾಣೆ ಪಿಎಸ್‌ಐ ವೈ.ಎನ್.ರವಿಕುಮಾರ್, ಪ್ರಭಾರ ಬಿಇಒಕೆ.ರವೀಶ್, ವಲಯ ಅರಣ್ಯಾಧಿಕಾರಿ ಸಂಪತ್‌ಪಾಟೀಲ್, ಕಾರ್ಮಿಕ ನಿರೀಕ್ಷಕ ಎನ್.ಟಿ.ಶಿವಕುಮಾರ್, ಕಾನೂನು ಸೇವಾ ಸಮಿತಿ ಸಿಬ್ಬಂದಿ ಸೋನುಮೂರ್ತಿ, ರಮೇಶ್ ಸೇರಿದಂತೆ ವಿವಿಧ ಬ್ಯಾಂಕ್ ಅಧಿಕಾರಿಗಳು ಮತ್ತು ವಕೀಲರು ಇದ್ದರು.