ಮಕ್ಕಳಿಗೆ ಲಸಿಕೆ ಹಾಕಿಸುವುದರಿಂದ ಅಂಗವಿಕಲತೆ ತಡೆಗಟ್ಟಬಹುದು. ಪೋಲಿಯೋ ನಿರ್ಮೂಲನೆ ಕೇವಲ ಸರ್ಕಾರದ ಪಾತ್ರ ಮಾತ್ರವಲ್ಲದೆ ಸಮಾಜ ಸೇವಾ ಸಂಸ್ಥೆಗಳು ಮತ್ತು ಪೋಷಕರ ಸಹಕಾರ ಅಗತ್ಯವಾಗಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಷಕರು ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು.

ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಬಳಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಮತ್ತು ಇನ್ನರ್ ವೀಲ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಿಗೆ ಲಸಿಕೆ ಹಾಕಿಸುವುದರಿಂದ ಅಂಗವಿಕಲತೆ ತಡೆಗಟ್ಟಬಹುದು. ಪೋಲಿಯೋ ನಿರ್ಮೂಲನೆ ಕೇವಲ ಸರ್ಕಾರದ ಪಾತ್ರ ಮಾತ್ರವಲ್ಲದೆ ಸಮಾಜ ಸೇವಾ ಸಂಸ್ಥೆಗಳು ಮತ್ತು ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ.ರವಿಶಂಕರ್ ಮಾತನಾಡಿ, ಪೋಲಿಯೋ ಕಾರ್ಯಕ್ರಮದಲ್ಲಿ ಈ ಬಾರಿ 14,822 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 115 ಬೂತ್ ಗಳನ್ನು ಸ್ಥಾಪಿಸಲಾಗಿದೆ. ಆರೋಗ್ಯ ಇಲಾಖೆ 228 ತಂಡಗಳು ಮತ್ತು 460 ಸಿಬ್ಬಂದಿಯನ್ನು ಲಸಿಕೆ ನೀಡಲು ನಿಯೋಜಿಸಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಮೂರು ದಿನಗಳು 13,428 ಮಕ್ಕಳಿಗೆ ಲಸಿಕೆ ಹಾಕಲಾಗುವುದು. ನಂತರ ಲಸಿಕೆಯಿಂದ ವಂಚಿತರಾದ ಮಕ್ಕಳಿಗೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು. ನಗರ ಪ್ರದೇಶದಲ್ಲಿ 1394 ಮಕ್ಕಳಿಗೆ ಮನೆ ಮನೆಗೆ ತೆರಳಿ ಲಸಿಕೆ ಹಾಕಲಾಗುವುದು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ನೋಡಲ್ ಅಧಿಕಾರಿ ಡಾ.ಬೆಟ್ಟಸ್ವಾಮಿ, ಮರಿಸ್ವಾಮಿ, ಮಣಿ, ರೋಟರಿ ಸಂಸ್ಥೆ ಅಧ್ಯಕ್ಷ ಬಿಂದಾಸ್ ಶ್ರೀನಿವಾಸ್, ಅಪ್ಪಾಜಿಗೌಡ, ಹೊನ್ನೇಗೌಡ, ತಿಪ್ಪುರು ರಾಜೇಶ, ಯೋಗೇಶ್, ಪ್ರವೀಣ್, ಮಹೇಶ, ಶಶಿಗೌಡ, ರಾಧಾ, ಇನ್ನ ರರ್ವಿಲ್ ಅಧ್ಯಕ್ಷ ಶ್ವೇತಾ ಶಶಿ ಗೌಡ, ಮಾಜಿ ಅಧ್ಯಕ್ಷರಾದ ರೇಖಾರಾಜು, ಜ್ಯೋತಿ ಗಿರೀಶ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.