ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಡಾ.ಎಂ.ಪಿ.ಸದಾನಂದ ಅವರು ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸಮುದಾಯದ ಸಮಸ್ಯೆಗಳು, ಅಗತ್ಯಗಳನ್ನು ಸಮೀಪದಿಂದ ಅರಿತು ಅವುಗಳಿಗೆ ಪರಿಹಾರಗಳನ್ನೂ ಕಂಡುಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಒಕ್ಕಲಿಗ ಸಮುದಾಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಚನಾತ್ಮಕ ಚಟುವಟಿಕೆಗಳೊಂದಿಗೆ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ದೃಷ್ಟಿಯಿಂದ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದೇನೆ ಎಂದು ಡಾ.ಎಂ.ಪಿ.ಸದಾನಂದ ತಿಳಿಸಿದ್ದಾರೆ.ಓರಲ್ ಅಂಡ್ ಮ್ಯಾಕ್ಸಲೋಫೇಶಿಯಲ್ ಸರ್ಜನ್ ಆಗಿರುವ ಡಾ.ಎಂ.ಪಿ.ಸದಾನಂದ ಅವರು ಹಲವಾರು ವರ್ಷಗಳಿಂದ ವಿವಿಧ ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಾ ಗಮನಸೆಳೆದಿದ್ದಾರೆ. ಮುಂದಿನ ದಿನಗಳಲ್ಲಿ ಒಕ್ಕಲಿಗ ಸಮುದಾಯದ ಶಿಕ್ಷಣ, ಆರೋಗ್ಯ, ಆರ್ಥಿಕ ಸಬಲೀಕರಣ, ಸಾಮಾಜಿಕ ಅಭಿವೃದ್ಧಿ ಹಾಗೂ ಯುವಜನರ ಪ್ರಗತಿಗೆ ಪ್ರಾಮಾಣಿಕವಾಗಿ ಮತ್ತು ನಿರಂತರವಾಗಿ ಶ್ರಮಿಸುವ ಸಂಕಲ್ಪ ಮಾಡಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಚುನಾಯಿತ ಸೆನೆಟ್ ಸದಸ್ಯರಾಗಿ, ರಾಜ್ಯ ಡೆಂಟಲ್ ಕೌನ್ಸಿಲ್ ಸದಸ್ಯರಾಗಿ, ಭಾರತ ಸರ್ಕಾರದ ರಸಗೊಬ್ಬರ ಮತ್ತು ರಾಸಾಯನಿಕ ಕ್ಷೇತ್ರದ ಸಲಹಾ ಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದ ನಾಯಕತ್ವದ ಜವಾಬ್ದಾರಿಯನ್ನು ನಿರ್ವಹಿಸುತ್ತಾ ಸಮಾಜಸೇವೆ ಮತ್ತು ಜನಸೇವೆಯಲ್ಲಿ ಸಕ್ರಿಯವಾಗಿ ತೊಡಗಿರುವುದಾಗಿ ಹೇಳಿದ್ದಾರೆ.ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿರುವ ಡಾ.ಎಂ.ಪಿ.ಸದಾನಂದ ಅವರು ಸಮುದಾಯದ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಸಮುದಾಯದ ಸಮಸ್ಯೆಗಳು, ಅಗತ್ಯಗಳನ್ನು ಸಮೀಪದಿಂದ ಅರಿತು ಅವುಗಳಿಗೆ ಪರಿಹಾರಗಳನ್ನೂ ಕಂಡುಕೊಂಡಿದ್ದಾರೆ. ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ವಿದ್ಯಾಭ್ಯಾಸ, ಉನ್ನತ ವ್ಯಾಸಂಗಕ್ಕೆ ನೆರವು, ಬಡವರಿಗೆ ಕಲ್ಪಿಸಬಹುದಾದ ಸೌಲಭ್ಯಗಳು, ಸಂಘದಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಒಕ್ಕಲಿಗರ ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವು ಕನಸುಗಳನ್ನು ಸಾಕಾರಗೊಳಿಸಲು ಸಂಘಕ್ಕೆ ನಿರ್ದೇಶಕರಾಗಲು ಬಯಸಿರುವುದಾಗಿ ತಿಳಿಸಿದ್ದಾರೆ.