ವಿಜಯಪುರ: ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಗಾಂಧಿ ಚೌಕ್‌ನಲ್ಲಿ ಹಿಂದೂಪರ ಹೋರಾಟಗಾರ ಪ್ರಮೋದ್ ಮುತಾಲಿಕ್ ದಿಕ್ಸೂಚಿ ಭಾಷಣ ಮಾಡಿದರು.
ಭಾರತ ಕೇವಲ ಭೂಪ್ರದೇಶವಲ್ಲ, ಅದು ಒಂದು ಸಂಸ್ಕೃತಿ, ಒಂದು ಭಾವನೆ, ಅಖಂಡ ಭಾರತ ನಮ್ಮ ಪೂರ್ವಜರ ಕನಸು, ಅದನ್ನು ನನಸಾಗಿಸುವ ಜವಾಬ್ದಾರಿ ಇಂದಿನ ಯುವ ಪೀಳಿಗೆ ಮೇಲಿದೆ. ಯುವಕರು ಕೇವಲ ಉದ್ಯೋಗದ ಹಿಂದೆ ಬೀಳದೆ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಮತ್ತು ಹಿಂದೂ ಸಂಸ್ಕೃತಿ ರಕ್ಷಣೆಯ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಕರೆ ನೀಡಿದರು.ಅಕ್ಕನ ಬಳಗದ ಅಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ದೇಶದ ಸಮಗ್ರತೆ ಕಾಪಾಡುವಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರದ ಮಹತ್ತರವಾದದ್ದು ಎಂದರು.
ವಿಶ್ವ ಹಿಂದೂ ಪರಿಷದ್ ಕೋಲಾರ ವಿಭಾಗ ಕಾರ್ಯದರ್ಶಿ ಗೌರಿಶಂಕರ್, ಸಹಕಾರ್ಯದರ್ಶಿ ರವಿ, ಬಜರಂಗದಳ ಕೋಲಾರ ವಿಭಾಗ ಸಂಯೋಜಕ ಕೃಷ್ಣಮೂರ್ತಿ, ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷ ಸತೀಶ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್, ಸಹ ಸಂಯೋಜಕ ಮಣಿಕಂಠ, ತಾಲೂಕು ಸಂಯೋಜಕ ಮುನಿಕೃಷ್ಣ ಇತರರಿದ್ದರು.ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೂ ದೇಶದ ಏಕತೆ ಮತ್ತು ಅಖಂಡ ಭಾರತದ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಪ್ರತಿಜ್ಞೆ ಕೈಗೊಂಡರು. ಗಂಗಾದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
(ಫೋಟೋ ಕ್ಯಾಫ್ಞನ್)
ವಿಜಯಪುರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸಹಯೋಗದಲ್ಲಿ ಅಖಂಡ ಭಾರತ ಸಂಕಲ್ಪ ಸಮಾವೇಶದಲ್ಲಿ ಹಿಂದೂಪರ ಹೋರಾಟಗಾರ ಪ್ರಮೋದ್ ಮುತಾಲಿಕ್ ದಿಕ್ಸೂಚಿ ಭಾಷಣ ಮಾಡಿದರು.