ಮೋದಿ ಪ್ರಧಾನಿ: ಶಹಾಪುರದಲ್ಲಿ ಬಿಜೆಪಿ ಸಂಭ್ರಮಾಚರಣೆ

| Published : Jun 11 2024, 01:33 AM IST

ಸಾರಾಂಶ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ ಶಹಾಪುರ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ವೇಳೆ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ದೇವೇಂದ್ರ ಕೋನೆರ್‌, ಕಾಂಗ್ರೆಸ್‌ನವರ ಗ್ಯಾರಂಟಿ ಕರ್ನಾಟಕದಲ್ಲಿ ನಡೆಯಲಿಲ್ಲ. ದೇಶದ ಜನತೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾದಾರೆ ಮಾತ್ರ ಈ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಮನಗಂಡು ಮೂರನೇ ಬಾರಿಗೆ ಎನ್‌ಡಿಎಗೆ ಬಹುಮತ ನೀಡಿದ್ದಾರೆ ಎಂದರು.

ನರೇಂದ್ರ ಮೋದಿ ಜನಪರ ಯೋಜನೆ, ಜನರ ಬಗೆಗಿನ ಕಾಳಜಿ, ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಅವರ ಕನಸು ನನಸಾಗಲಿದೆ. ಕಾಂಗ್ರೆಸ್ ಸುಳ್ಳು ಆಶ್ವಾಸನೆಗೆ ಸೊಪ್ಪು ಹಾಕದೆ ಬಿಜೆಪಿ ಗೆಲ್ಲಿಸಿರುವುದಕ್ಕೆ ಮತದಾರರನ್ನು ನಾವು ಗೌರವಿಸುತ್ತೇವೆ ಎಂದರು.

ಬಿಜೆಪಿ ಹಿರಿಯ ಮುಖಂಡ ಬಸವರಾಜ ವಿಭೂತಿ ಹಳ್ಳಿ ಮಾತನಾಡಿ, ದೂರದೃಷ್ಟಿ ಹೊಂದಿರುವ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚಿಸಿದ್ದಾರೆ. ಭಾರತವನ್ನು ಬದಲಾವಣೆಯ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಉನ್ನತ ಮಟ್ಟಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ದೇಶದಲ್ಲಿ ರೈತರ, ಕಾರ್ಮಿಕರ ಮೊಗದಲ್ಲಿ ನೆಮ್ಮದಿ ಜೀವನ ಕಾಣಬೇಕಾದರೆ ಮತ್ತು ಯುವಕರಲ್ಲಿ ಉದ್ಯೋಗ ಸೃಷ್ಟಿ ಮೂಲಕ ಭರವಸೆಯ ಬದುಕು ರೂಪಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಬಿಜೆಪಿ ಹಿರಿಯ ಮುಖಂಡ ಅಡಿವಪ್ಪ ಜಾಕಾ, ಶಿವರಾಜ್ ದೇಶಮುಖ್, ಚಂದ್ರಶೇಖರ್ ಯಾಳಗಿ, ರಾಘವೇಂದ್ರ ಯಕ್ಷಿoತಿ, ಉಮೇಶ್ ಮಹಾಮನಿ, ಮಂಜುನಾಥ್ ಅಲಬನೂರ, ಯಂಕಪ್ಪ ಸೇರಿ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.