ಸಾರಾಂಶ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ದೇಶ ವಿದೇಶಗಳಲ್ಲಿ ಶ್ರೀಕೃಷ್ಣನ ಆರಾದನೆ ನಡೆಯುತ್ತದೆ. ಕೃಷ್ಣ ಎಂದರೆ ಉಲ್ಲಾಸ , ಉತ್ಸಾಹ, ಕೃಷ್ಣ ಎಂದರೆ ಭಗವದ್ಗೀತೆ, ಕೃಷ್ಣ ಎಂದರೆ ಸತ್ಯ, ನಿಷ್ಠೆ, ಧರ್ಮ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.ಸೋಮವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದವ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ಧ ಶ್ರೀ ಕೃಷ್ಣ ಜಯಂತಿಯಲ್ಲಿ ಅವರು ಮಾತನಾಡಿ, ಮೋದಿಯವರು ದಿವ್ಯ ಕಾಶಿಯನ್ನು ಭವ್ಯ ಕಾಶಿಯನ್ನಾಗಿ ಮಾಡಿದ್ದಾರೆ, ಈಗ ಶ್ರೀಕೃಷ್ಣನ ಮಥುರಾವನ್ನು ಸಂಪೂರ್ಣ ವಿಕಾಸಗೊಳಿಸಿ, ದ್ವಾರಕೆಯ ಅಭಿವೃದ್ಧಿಗೆ ಬದ್ದರಾಗಿದ್ದಾರೆ ಎಂದರು.
ಶ್ರೀಕೃಷ್ಣ ಭವನಕ್ಕೆ ₹50 ಲಕ್ಷಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ದನಾಗಿದ್ದು, ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ರಾಜಕಾರಣ ಮಾಡುವುದಿಲ್ಲಾ. ಎಲ್ಲ ರೀತಿಯ ಸಹಕಾರ ನೀಡಲು ಸದಾ ಸಿದ್ದನಾಗಿರುತ್ತೇನೆ. ಶ್ರೀ ಕೃಷ್ಣ ಭವನಕ್ಕೆ ಜಮೀನು ಮಂಜೂರು ಮಾಡಿದ್ದು, ಭವನ ನಿರ್ಮಾಣಕ್ಕೆ ಸಂಸದರ ನಿಧಿಯಿಂದ 50 ಲಕ್ಷಗಳನ್ನು ದೇಣೀಡುವುದಾಗಿ ಘೋಷಿಸಿ, ಭವನಕ್ಕೆ ಶ್ರೀಘ್ರದಲ್ಲೇ ಅನುದಾನ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರವರಿಗೆ ಮನವಿ ಮಾಡಿದರು.ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಗವದ್ಗೀತೆ ಒಂದು ವಿಶೇಷವಾದ ಶ್ರೇಷ್ಠ ಗ್ರಂಥ. ಅದರಲ್ಲಿ ಉಲ್ಲೇಖಿತವಾಗಿರುವ ಶ್ರೀಕೃಷ್ಣನು ಅರ್ಜುನನಿಗೆ ಭೋಧಿಸಿದ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತ. ಅಂತಹ ತತ್ವಾದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಂಡು, ಈ ದೇಶವನ್ನು ಸಧೃಡವಾಗಿ ಕಟ್ಟಬೇಕು ಎಂದರು.
ಶೇ.20ರಷ್ಟು ಯಾದವರುಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಭಾರತದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಯಾದವ ಸಮುದಾಯದವರೆ ಇದ್ದಾರೆ. ಯಾವುದೇ ಸಮುದಾಯದವರು ಉನ್ನತ ಶಿಕ್ಷಣವನ್ನು ಪಡೆಯುವುರಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯ. ಇತಿಹಾಸವನ್ನು ನೋಡಿದರೆ ರಾಜಕೀಯವಾಗಿ ಯಾದವ ಸಮುದಾಯದವರೆ ಹೆಚ್ಚು ಪ್ರಬಲವಾಗಿ ಆಡಳಿತವನ್ನು ನಡೆಸಿದ್ದಾರೆ. ಶ್ರೀ ಕೃಷ್ಣ ಭವನಕ್ಕೆ ಸಂಸದರು ಹಣ ಬಿಡುಗಡೆ ಮಾಡಿದ ತಕ್ಷಣ ಸರ್ಕಾರದಿಂದ ಅನುದಾನ ಮಂಜೂರು ಮಾಡಿಸಿ ಕೊಂಡು ಬರುವುದಾಗಿ ತಿಳಿಸಿದರು.ಹೂವಿನ ಪಲ್ಲಕ್ಕಿ ಮೆರವಣಿಗೆ
ಕಾರ್ಯಕ್ರಮದಲ್ಲಿ ತಾಲೂಕಿನ ಪೆರೇಸಂದ್ರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಶುಪಾಲ ಪಿ.ಎನ್.ನರಸಿಂಹರೆಡ್ಡಿ ಶ್ರೀಕಷ್ಣ ಜಯಂತಿ ಬಗ್ಗೆ ಉಪನ್ಯಾಸ ನೀಡಿದರು. ಎಸ್,ಎಸ್,ಎಲ್,ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ಶಿಕ್ಷಕರು ಮತ್ತು ನಿವೃತ್ತ ಸರ್ಕಾರಿ ಅಧಿಕಾರಿ, ನೌಕರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಂತರ ಹೂವಿನ ಪಲ್ಲಕ್ಕಿ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು.ಈ ಸಂಧರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ. ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ತಹಶೀಲ್ದಾರ್ ಅನೀಲ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಕಾಂಗ್ರೆಸ್ ಜಿಲ್ಲಾದ್ಯಕ್ಷ ಕೆ.ಎನ್.ಕೇಶವರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಡಿ.ವಿ.ರಾಮಲಿಂಗಪ್ಪ. ಖಾದಿ ಮಂಡಳಿ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್, ರಾಜ್ಯಯಾದವ ಕ್ಷೇಮಾಭಿವೃದ್ಧಿ ಸಂಘದ ನಿರ್ದೇಶಕ ದೇವಿಶೆಟ್ಟಹಳ್ಳಿ ಎಂ.ಗಂಗಾಧರ್, ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ವಿ.ಮುನಿಕೃಷ್ಣಪ್ಪ, ಮತ್ತಿತರರು ಉಪಸ್ಥಿತರಿದ್ದರು.