ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

| Published : Sep 24 2025, 01:02 AM IST

ಪ್ರಧಾನಿ ಮೋದಿ ಜನ್ಮದಿನ: ಬಿಜೆಪಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಮೋದಿ ಅಭಿಮಾನಿ ಬಳಗ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭ ಮಾತನಾಡಿದ ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಭಾರತ ವಿಶ್ವಗುರುವಾಗುವಲ್ಲಿ ಪ್ರಧಾನಿ ಮೋದಿಯವರ ಪಾತ್ರ ಪ್ರಮುಖವಾಗಿದೆ. ಅವರ ಆರೋಗ್ಯ, ಆಯಷ್ಯ ವೃದ್ಧಿಯಾಗಲಿ ಎಂದು ನಗರ ಮಂಡಲದ ನೇತೃತ್ವದಲ್ಲಿ ಎಲ್ಲರ ಸಹಕಾರದೊಂದಿಗೆ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಸರ್ಕಾರಿ ಆಸ್ಪತ್ರೆಯ ಬಡರೋಗಿಗಳಿಗೆ ಹಾಗೂ ಆಶ್ರಮದಲ್ಲಿರುವ ವಿಶೇಷ ಚೇತನರಿಗೆ ಹಣ್ಣ ಹಂಪಲು ವಿತರಿಸಲಾಗುತ್ತಿದೆ ಎಂದರು.

ನಗರ ಮಂಡಲದ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ ಮಾತನಾಡಿ, ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೆ.೧೭ರಿಂದ ಅ.೨ರ ತನಕ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ವಿವಿಧ ಸೇವಾ ಕಾರ್ಯಗಳು ನಡೆಯಲಿದೆ ಎಂದರು.ಈ ಸಂದರ್ಭ ಸುಮಾರು ೨೫೦ ಮಂದಿ ರೋಗಿಗಳಿಗೆ ಹಾಗೂ ಆಶ್ರಮವಾಸಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿ ವಿರೂಪಾಕ್ಷ ಭಟ್, ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲದ ಉಪಾಧ್ಯಕ್ಷ ಸಂತೋಷ್ ರೈ ಕೈಕಾರ, ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ, ಮಹಿಳಾ ಮೋರ್ಚಾ ಜಯಲಕ್ಷ್ಮೀ ಶಗ್ರಿತ್ತಾಯ, ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಸದಸ್ಯರಾದ ವಿದ್ಯಾ ಗೌರಿ, ಗೌರಿ ಬನ್ನೂರು, ಮನೋಹರ್ ಕಲ್ಲಾರೆ, ದೀಕ್ಷಾ ಪೈ, ಪುರಸಭಾ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ಯು.ಲೋಕೇಶ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.