ರೈತರಿಗೆ, ಮಹಿಳೆಯರಿಗೆ, ಯುವಕರಿಗೆ, ಅಲ್ಪಸಂಖ್ಯಾತರಿಗೆ, ಹಿಂದುಳಿದ ವರ್ಗ ಸೇರಿ ಎಲ್ಲಾ ವರ್ಗದ ಜನರಿಗೂ ಮೋದಿಯವರಿಂದ ಸ್ವಾವಲಂಬನೆ ಜೀವನ ನಡೆಸಿಕೊಡಲು ಅನೇಕ ಯೋಜನೆಗಳನ್ನು ರೂಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದನ್ನು ನಮ್ಮ ಜನರಿಗೆ ತಿಳಿಸುವಂತಾಗಬೇಕು ಜೊತೆಗೆ ಸದುಪಯೋಗವಾಗುವಂತೆ ಮಾಡಬೇಕು.
ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಪಂಚದಲ್ಲಿ ಎಲ್ಲೇ ಇದ್ದರೂ ಮನ್ ಕಿ ಬಾತ್ ಕಾರ್ಯಕ್ರಮ ನಿಲ್ಲಿಸಲಿಲ್ಲ, ಪ್ರತಿ ರಾಜ್ಯದಲ್ಲಿ ಏನೇನು ವಿಶೇಷತೆಗಳು ನಡೆಯುತ್ತಿವೆ ಎಂಬುದನ್ನು ಗಮನಿಸಿ ಈ ದೇಶವನ್ನು ಒಗ್ಗೂಡಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು.ಬಂಗಾರಪೇಟೆ ತಾಲೂಕಿನ ಆಲಂಬಾಡಿ ಜ್ಯೋತನಹಳ್ಳಿ ಗ್ರಾಪಂ ವ್ಯಾಪ್ತಿಯ ಹಿರೇಕರ್ಪನಹಳ್ಳಿಯಲ್ಲಿ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾದಿಂದ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಲ್ಲ, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ನರೇಂದ್ರ ಮೋದಿ ರವರು ಮಾಡಿರುವಂತಹ ಉತ್ತಮ ಕೆಲಸಗಳನ್ನು ಜನರಿಗೆ ತೋರಿಸಿ ಪಕ್ಷವನ್ನು ಬಲಿಷ್ಠ ಗೊಳಿಸಬೇಕು ಎಂದರು.ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್.ನಡಹಳ್ಳಿ ಮಾತನಾಡಿ, ರೈತರಿಗೆ, ಮಹಿಳೆಯರಿಗೆ, ಯುವಕರಿಗೆ, ಅಲ್ಪಸಂಖ್ಯಾತರಿಗೆ, ಹಿಂದುಳಿದ ವರ್ಗ ಸೇರಿ ಎಲ್ಲಾ ವರ್ಗದ ಜನರಿಗೂ ಮೋದಿಯವರಿಂದ ಸ್ವಾವಲಂಬನೆ ಜೀವನ ನಡೆಸಿಕೊಡಲು ಅನೇಕ ಯೋಜನೆಗಳನ್ನು ರೂಪಿಸಿ ಅನುಕೂಲ ಮಾಡಿಕೊಟ್ಟಿದ್ದಾರೆ. ಅದನ್ನು ನಮ್ಮ ಜನರಿಗೆ ತಿಳಿಸುವಂತಾಗಬೇಕು ಜೊತೆಗೆ ಸದುಪಯೋಗವಾಗುವಂತೆ ಮಾಡಬೇಕು ಎಂದರು.
ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ , ಪ್ರಧಾನ ಕಾರ್ಯದರ್ಶಿ ಶಿವಣ್ಣ, ತಾಲೂಕು ಅಧ್ಯಕ್ಷ ಚಂದ್ರು, ಮಾಲೂರು ತಾಲೂಕು ಅಧ್ಯಕ್ಷ ಕೃಷ್ಣಪ್ಪ, ಪುರಸಭಾ ಸದಸ್ಯ ಕಪಾಲಿಶಂಕರ್, ಮುಖಂಡರಾದ ಬೊಪ್ಪನಹಳ್ಳಿ ನಾರಾಯಣಪ್ಪ, ಹೊಸರಾಯಪ್ಪ, ಸೋಮಣ್ಣ, ಶಿವು, ಬಾಬು, ನಾರಾಯಣಸ್ವಾಮಿ, ಚನ್ನಕೇಶವ, ಶ್ರೀನಿವಾಸ್, ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಗೋಪಸಂದ್ರ ನಾರಾಯಣಸ್ವಾಮಿ, ಖಜಾಂಚಿ ಪಿ.ವೆಂಕಟೇಶ್, ಕೆ.ವಿ.ಮಂಜುನಾಥ್, ಬಲ್ಲಹಳ್ಳಿ ರಾಮಚಂದ್ರಪ್ಪ, ಮಾಲೂರು ತಾಲೂಕು ಅಧ್ಯಕ್ಷ ಬೆಳ್ಳಾವಿ ಸೋಮಣ್ಣ, ಬಾಬು ಇದ್ದರು.