ಸಾರಾಂಶ
ಭಾನುವಾರ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಹಾವೇರಿ- ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ರೋಣ
ಜಗತ್ತೇ ಭಾರತ ದೇಶದತ್ತ ತಿರುಗಿ ನೋಡುವಂತೆ ಅಭಿವೃದ್ಧಿ ಪಥದತ್ತ ಕೊಂಡೊಯ್ದ ಪ್ರಧಾನಿ ನರೇಂದ್ರ ಮೋದಿ ಕೊಡುಗೆ ಶ್ಲಾಘನೀಯವಾಗಿದೆ. ದೇಶ ಇನ್ನಷ್ಟು ಪ್ರಗತಿ ಹೊಂದಲು ಮೋದಿ ಸೇವೆ ಅಗತ್ಯವಿದೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.ಭಾನುವಾರ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಹಾವೇರಿ- ಗದಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ದೇಶದ ಭದ್ರತೆಯಲ್ಲಿ ಮೋದಿ ದಿಟ್ಟ ನಿರ್ಧಾರಗಳು ಪ್ರತಿಯೊಬ್ಬ ನಾಗರಿಕರು ಮೆಚ್ಚುವಂಥವುಗಳಾಗಿವೆ. ದೇಶದ ಹಿತದೃಷ್ಟಿಯಿಂದ ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿಯಾಗಬೇಕು. ಈ ದಿಶೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಅವರು ಗೆಲ್ಲಲೇಬೇಕು. ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಅನೇಕ ಮಹತ್ವಪೂರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಜನರ ಸೇವೆಯೇ ಉಸಿರನ್ನಾಗಿಸಿಕೊಂಡ ಬಸವರಾಜ ಬೊಮ್ಮಾಯಿ ಅವರು ಗೆಲುವು ನೂರಕ್ಕೆ ನೂರರಷ್ಟು ಖಚಿತವಾಗಿದೆ. ಈ ದಿಶೆಯಲ್ಲಿ ಜನತೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದರು.ಬಿಜೆಪಿ ರೋಣ ಮಂಡಲ ಅಧ್ಯಕ್ಷ ಮುತ್ತಣ್ಣ ಕಡಗದ, ಹಿರಿಯ ಮುಖಂಡ ಅಶೋಕ ನವಲಗುಂದ ಮಾತನಾಡಿದರು.
ವಿವಿಧೆಡೆ ಪ್ರಚಾರ:ಮಾಜಿ ಸಚಿವ ಕಳಕಪ್ಪ ಬಂಡಿ ಅವರು ತಾಲೂಕಿನ ಹಿರೇಮಣ್ಣೂರ, ಚಿಕ್ಕಮಣ್ಣೂರ, ಅರಹುಣಸಿ, ಬಾಸಲಾಪುರ ಮುಂತಾದ ಗ್ರಾಮಗಳಲ್ಲಿ ಪ್ರಚಾರ ಕೈಗೊಂಡರು. ಈ ವೇಳೆ ಮುಖಂಡರಾದ ಬಿ.ಎಂ. ಸಜ್ಜನ, ಶಿವಾನಂದ ಮಠದ, ಸಿದ್ದಣ್ಣ ಬಳಿಗೇರ, ಅನೀಲ ಪಲ್ಲೇದ, ಶಿವಾನಂದ ಜಿಡ್ಡಿಬಾಗೀಲ, ಗ್ರಾಪಂ ಮಾಜಿ ಉಪಾಧ್ಯಕ್ಷ ಎಸ್.ವಿ. ಪಾಟೀಲ, ದೇವಪ್ಪ ಆರಮಣದ, ಮಲ್ಲಿಕಾರ್ಜುನಗೌಡ ಚೌಡರಡ್ಡಿ, ನಾಗರಾಜ ಶಲವಡಿ, ಬಸನಗೌಡ ರಂಗನಗೌಡ್ರ, ನೀಲಪ್ಪ ಹವಳಪ್ಪನವರ, ಬಸವರಾಜ ಕೊಟಗಿ, ಮುತ್ತಣ್ಣ ಕುರಿ, ಹನುಮಂತ ಪೂಜಾರ ಮುಂತಾದವರು ಉಪಸ್ಥಿತರಿದ್ದರು.