ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯ ಹಾಗೂ ಜೇನುಕುರುಬರ ಸಮಗ್ರ ಅಭಿವೃದ್ಧಿಗೆ ಪ್ರಧಾನಮಂತ್ರಿ ಜನ್ ಮನ್ ಯೋಜನೆಯ ಮೂಲಕ 20 ಕೋಟಿ ರು. ಮಂಜೂರಾಗಿದೆ. ಸಮಾಜದ ಎಲ್ಲ ವರ್ಗದವರನ್ನು ಮುಖ್ಯವಾಹಿನಿಗೆ ತರುವುದು ಪ್ರಧಾನಮಂತ್ರಿಗಳ ಕನಸು ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ.ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.ಆರೋಗ್ಯ, ಆಶ್ರಯ ಹಾಗೂ ಅಕ್ಷರದ ಉದ್ದೇಶಕ್ಕೆ ಭಾರತೀಯ ಜನತಾ ಪಾರ್ಟಿಯ ಸ್ಥಾಪನೆಯಾಗಿದೆ. ಬಿಜೆಪಿಯ ಅನಂತಾಡಿ ಶಕ್ತಿ ಕೇಂದ್ರ, ಸಮಾಜದಲ್ಲಿ ಹಿಂದುಳಿದ ಸ್ಥಿತಿಯಲ್ಲಿರುವ ಕೊರಗ ಸಮುದಾಯಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ. ಧರ್ಮದ ಹಾದಿಯಲ್ಲಿ ನಡೆದಾಗ ದೇವರ ಕೃಪೆ ಲಭಿಸುತ್ತದೆ ಎನ್ನುವುದಕ್ಕೆ ಇದೇ ಉದಾಹರಣೆ ಎಂದರು.
ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಮಾತನಾಡಿದರು.ಮನೆ ನಿರ್ಮಾಣಕ್ಕೆ ವಿಶೇಷ ಸಹಕಾರ ನೀಡಿದ ನಾಟಿವೈದ್ಯ ಗಂಗಾಧರ ಪಂಡಿತ್ ದಂಪತಿಯನ್ನು ಹಾಗೂ ವಿದ್ಯುತ್ ವ್ಯವಸ್ಥೆಯನ್ನು ಒದಗಿಸಿಕೊಟ್ಟ ಕರುಣಾಕರ ರೈ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.ಬಿಜೆಪಿ ಮಂಡಲದ ರೈತ ಮೋರ್ಚಾದ ಅಧ್ಯಕ್ಷ ಸನತ್ ಕುಮಾರ್ ರೈ, ಗ್ರಾ.ಪಂ. ಅಧ್ಯಕ್ಷೆ ಸುಜಾತ ಸುರೇಶ್, ತಾ.ಪಂ. ಮಾಜಿ ಸದಸ್ಯರಾದ ಗೀತಾ ಚಂದ್ರಶೇಖರ್, ಮಾಣಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಮೊದಲಾದವರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.ಅನಂತಾಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹಾಬಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.ಪುತ್ತೂರು ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಪಿ., ಬಿಜೆಪಿ ಪ್ರಮುಖರಾದ ಸುದರ್ಶನ್ ಬಜ, ದಿನೇಶ್ ಅಮ್ಟೂರು, ಪುಷ್ಪರಾಜ್ ಚೌಟ, ಮಾಧವ ಮಾವೆ, ಸಂದೇಶ್ ಶೆಟ್ಟಿ ಅರೆಬೆಟ್ಟು, ರಶ್ಮಿತ್ ಶೆಟ್ಟಿ, ತನಿಯಪ್ಪ ಗೌಡ, ಪುಷ್ಪರಾಜ ಚೌಟ, ನಾರಾಯಣ ಶೆಟ್ಟಿ ದೋಟ, ಬಲ್ಲು ಕೊರಗ ಉಪಸ್ಥಿತರಿದ್ದರು.ಬೆಳಗ್ಗೆ ಅನಂತಾಡಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಪ್ರಧಾನ ಅರ್ಚಕ ಕೊಬ್ರಿಮಠ ಗೋಪಾಲಕೃಷ್ಣ ಬನ್ನಿಂತಾಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.ಮಾಣಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ನಾಗೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು. ದಿನೇಶ್ ಪಿಲ್ಚಂಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.